ಚಿಕ್ಕಮಗಳೂರು: ನಗರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ (Congress Govt) ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ. ನಗರದ ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯ್ತಿ ಹಾಗೂ ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಂಟಿಸುವ ಮೂಲಕ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ.
Advertisement
ಇಷ್ಟೇ ಅಲ್ಲದೆ ಚಿಕ್ಕಮಗಳೂರು ನಗರದಲ್ಲಿ ಅಲ್ಲಲ್ಲೇ ಪೋಸ್ಟರ್ ಹಾಕಿ ಟೀಕೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಶ್ಯಾಡೋ ಸಿಎಂ (Shadow CM) ಎಂಬ ವ್ಯಂಗ್ಯ ಚಿತ್ರದ ಮೂಲಕ ವ್ಯಂಗ್ಯವಾಡಿದ್ದಾರೆ. ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಜೆ ಜಾರ್ಜ್ (K J George) ವಿರುದ್ಧವೂ ಪೋಸ್ಟರ್ ಹಾಕಿದ್ದು, ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆಯಾಗಿದ್ದಾರೆ ಎಂಬ ಪೋಸ್ಟರ್ ಜೊತೆಗೆ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿಯವರು ಈ ತಿಂಗಳ ಕಪ್ಪ ಎಲ್ಲಿ ಎಂದು ಪ್ರಶ್ನೆ ಕೇಳುತ್ತಿದ್ದು, ಈಗ ತಾನೇ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಇರೀ ಮೇಮ್…. ಎಂದು ಇಂಧನ ಸಚಿವ ಜಾರ್ಜ್ ಉತ್ತರಿಸುತ್ತಿರುವಂತೆ ಪೋಸ್ಟ್ ಹಾಕಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಾಗೂ ಸರ್ಕಾರದ ಪಂಚ ಗ್ಯಾರಂಟಿಗಳ ವಿರುದ್ಧ ವ್ಯಂಗ್ಯವಾಡಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ಪೊಲೀಸ್ ಇನ್ಸ್‌ಪೆಕ್ಟರ್ ವಿವೇಕಾನಂದ ವರ್ಗಾವಣೆ – ಯತೀಂದ್ರ ಪ್ರಸ್ತಾಪಿಸಿದ್ದ ವಿವೇಕಾನಂದ ಇವರೇನಾ?
Advertisement
Advertisement
ಅಭಿಯಾನದಲ್ಲಿ ಸೋನಿಯಾ ಗಾಂಧಿ (Sonia Gandhi), ಸಿ.ಎಂ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಯತೀಂದ್ರ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ವಿರುದ್ಧ ಪೋಸ್ಟರ್ ವಾರ್ ನಡೆಸಿದ್ದಾರೆ. ಸರ್ಕಾರ ಒಂದೆಡೆ ಉಚಿತ ಎಂದು ಹೇಳಿಕೊಂಡು ಮತ್ತೊಂದೆಡೆ ಸುಲಿಗೆ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ. ಇದು ಫ್ರೀ ಭಾಗ್ಯವಲ್ಲ. ಹಗಲು ದರೋಡೆ ಎಂದು ಚಿಕ್ಕಮಗಳೂರು ನಗರದಾದ್ಯಂತ ಅಲ್ಲಲ್ಲೇ ಪೋಸ್ಟರ್ ಹಾಕಿದ್ದಾರೆ.
Advertisement
ಜೊತೆಗೆ ವೈ.ಎಸ್.ಟಿ. ಸಂಗ್ರಹ ಸಮಿತಿಯ ಸಮಿತಿಯ ಸುತ್ತೋಲೆ, ಹಲೋ ಅಪ್ಪಾ, ಆ್ಯಪ್ ಡೌನ್‍ಲೋಡ್ ಮಾಡಿ ಪೇಮೆಂಟ್ ಮಾಡಿ. ಇದು ರಾಜ್ಯ ಸರ್ಕಾರದ ಹಗಲು ದರೋಡೆ ಬೆಳ್ಳಂಬೆಳಗ್ಗೆ ಕಾಂಗ್ರೆಸ್ ವಿರುದ್ಧ ಪೋಸ್ಟರ್ ಅಂಟಿಸಿದ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಲೇವಡಿ ಮಾಡಿದ್ದಾರೆ.