ನವದೆಹಲಿ: ಜೂನ್ 23ರಂದು ನಡೆಯಬೇಕಿದ್ದ ನೀಟ್-ಪಿಜಿ (NEET-PG) ಪರೀಕ್ಷೆಯನ್ನು ಮುಂದೂಡಲಾಗಿದೆ ಮತ್ತು ಹೊಸ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವಾಲಯ (Ministry Of Health)ತಿಳಿಸಿದೆ.
ನೀಟ್-ಪಿ.ಜಿ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಲ್ಲಿನ ಅಕ್ರಮಗಳ ಆರೋಪ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆ (ಜೂನ್ 23) ನಡೆಯಲಿರುವ ನೀಟ್-ಪಿಜಿಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಈ ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರವಾಗಿ ತಿಳಿಸಲಾಗುವುದು. ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಕರಾವಳಿಗೆ ವರ್ಷಧಾರೆಯ ಎಚ್ಚರಿಕೆ- ಇತ್ತ ಹಾವೇರಿಯಲ್ಲಿ ವಿಚಿತ್ರ ಆಚರಣೆ
Advertisement
Advertisement
ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಯ ಬಗ್ಗೆ ಇತ್ತೀಚಿನ ಆರೋಪಗಳನ್ನು ಪರಿಗಣಿಸಿ, ಆರೋಗ್ಯ ಸಚಿವಾಲಯವು ವೈದ್ಯಕೀಯ ವಿದ್ಯಾರ್ಥಿಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಯು ನಡೆಸುವ ನೀಟ್-ಯುಜಿ ಪ್ರವೇಶ ಪರೀಕ್ಷೆಯ ಪ್ರಕ್ರಿಯೆಗಳ ದೃಢತೆಯ ಸಂಪೂರ್ಣ ಮೌಲ್ಯಮಾಪನವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ರೈಲ್ವೆ ಪ್ಲಾಟ್‌ಫಾರ್ಮ್ ಟಿಕೆಟ್‌ಗಳಿಗೆ ತೆರಿಗೆ ಇಲ್ಲ- GST ಸಭೆಯಲ್ಲಿ ಮಹತ್ವದ ನಿರ್ಧಾರ
Advertisement
Advertisement
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷೆಯ ಪಾವಿತ್ರ‍್ಯತೆ ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ಹೇಳಿದೆ. ಇದನ್ನೂ ಓದಿ: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಡಾ. ಸೂರಜ್ ರೇವಣ್ಣ