ಬೆಂಗಳೂರು: ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ (Power Bill) ಏರಿಕೆಯ ಶಾಕ್ ಎದುರಾಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆ. 13 ರಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಇದಕ್ಕೆ ಹೊಟೇಲ್ ಉದ್ಯಮಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
- Advertisement 2
ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ ಏರಿಕೆಯ ಶಾಕ್ ತಟ್ಟಲಿದೆ. ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನಾಳೆಯಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಈ ನಿರ್ಣಯಕ್ಕೆ ಬೃಹತ್ ಬೆಂಗಳೂರು ಹೊಟೇಲ್ಗಳ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ಅವೈಜ್ಞಾನಿಕ ನಿರ್ಣಯ. ಗ್ರಾಹಕರ ಮೇಲೆ ಹೊರೆ ಹಾಕೋದು ಸಮಂಜಸವಲ್ಲ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪಂದ್ಯಶ್ರೇಷ್ಠ ಜಡೇಜಾಗೆ ಬಿಸಿ ಮುಟ್ಟಿಸಿದ ICC
- Advertisement 3
- Advertisement 4
ಎಸ್ಕಾಮ್ಗಳು ಪ್ರತಿ ಯುನಿಟ್ ಗೆ ಒಂದೂವರೆ ರೂಪಾಯಿಯಿಂದ 2 ರೂಪಾಯಿ ತನಕ ವಿದ್ಯುತ್ ದರ ಏರಿಕೆ ಕೋರಿ ಈಗಾಗಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ನಾಳೆಯಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದ್ದು, ಆಕ್ಷೇಪಣೆ, ಸಲಹೆ ಸೂಚನೆಗಳನ್ನು ಪರಿಗಣಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ತನ್ನ ನಿರ್ಧಾರ ಪ್ರಕಟಿಸಲಿದೆ. ಈಗಾಗಲೇ ಡಿಜಿಟಲ್ ಮೀಟರ್ಗಳ ಅಳವಡಿಕೆಯಿಂದಲೂ ವಿದ್ಯುತ್ ಬಿಲ್ ದುಪ್ಪಟ್ಟು ಬರ್ತಿದ್ದು, ಇದಕ್ಕೂ ಸಾರ್ವಜನಿಕರಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕಳೆದ ವರ್ಷ ರಾಜ್ಯದಲ್ಲಿ ಎರಡು ಬಾರಿ ವಿದ್ಯುತ್ ದರ ಏರಿಕೆ ಮಾಡಲಾಗಿತ್ತು. ಕಳೆದ ಏಪ್ರಿಲ್ನಲ್ಲಿ ಪ್ರತಿ ಯುನಿಟ್ ಗೆ 35 ಪೈಸೆ, ಸೆಪ್ಟೆಂಬರ್ ನಲ್ಲಿ ಇಂಧನ ಹೊಂದಾಣಿಕೆ ಹಿನ್ನಲೆ ಪ್ರತಿ ಯುನಿಟ್ಗೆ 24 ಪೈಸೆಯಿಂದ 43 ಪೈಸೆವರೆಗೆ ಏರಿಕೆ ಮಾಡಲಾಗಿತ್ತು. ಡಿಜಿಟಲ್ ಮೀಟರ್ಗಳ ಅಳವಡಿಕೆಯಿಂದಲೂ ವಿದ್ಯುತ್ ದರ ಹೆಚ್ಚೆಚ್ಚು ಬರ್ತಿತ್ತು. ಇದ್ರಿಂದ ಗ್ರಾಹಕರು ಕೂಡ ಆಕ್ರೋಶಗೊಂಡಿದ್ದು, ಯಾವ್ದೇ ಕಾರಣಕ್ಕೂ ವಿದ್ಯುತ್ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಬಾರದು ಅಂತ ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k