ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು (Bengaluru) ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಭಾರತ-ಪಾಕಿಸ್ತಾನ ಮ್ಯಾಚ್ (Ind Vs Pak Match) ನೊಡುವ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯಾಗುವ ಸಾಧ್ಯತೆಗಳಿವೆ.
Advertisement
ನಗರದ ಬಹುತೇಕ ಕಡೆ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವಿದ್ಯುತ್ ಸರಬರಾಜು ಕಂಪನಿಯ (BESCOM) ತಿಳಿಸಿದೆ. ಬೆಸ್ಕಾಂ ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿವೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ನಿರಾಸೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: World Cup 2023: ಇಂಡೋ-ಪಾಕ್ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?
Advertisement
Advertisement
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಎಸ್‌ಜೆಎಂ ನಗರ, ಎಸ್‌ಎಂಕೆ ನಗರ, ಬಾಬು ಜಗಜೀವನ ನಗರ, ದೇವರಾಜ್ ಅರಸ್ ಬಡಾವಣೆ, ವಿಜಯನಗರ ಬಡಾವಣೆ, ರಾಜೀವ್ ಗಾಂಧಿ ಬಡಾವಣೆ, ಎಸ್‌ಪಿ ಕಚೇರಿ, ಆರ್‌ಟಿಒ ಕಚೇರಿ, ಜ್ಯೋತಿನಗರ, ಶಂಕರಾನಂದ ಬಡಾವಣೆ, ಸಚಿನ್ ಲೇಔಟ್, ಗಂಗಮ್ಮ ಲೇಔಟ್, ಕಲ್ಲುಕೋಟೆ, ಪದವಿ ಕಾಲೇಜು ಸುತ್ತಮುತ್ತ, ನಾಗಾಜಿ ಗುಡೆನ್ಸಿ, ಪ್ರೆಸಿಡೆನ್ಸಿ, ಡೈರಿ ಸರ್ಕಲ್, ಫುಡ್ ಗೋಡೌನ್, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್ ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ದೊಡ್ಡರಸಹಳ್ಳಿ, ದೊಡರಸ ಅಗ್ರಹಾರ, ತಿ. ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ. ಇದನ್ನೂ ಓದಿ: ಇಂಡೋ-ಪಾಕ್ ವಿಶ್ವ ಸಮರ: ʻಗೆದ್ದು ಬಾ ಭಾರತʼ – ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ
Advertisement
Web Stories