ರಾಜ್ಯಾದ್ಯಂತ ಮೇ 5 ರಿಂದ 20 ರವರೆಗೆ ಟ್ರಾನ್ಸ್‌ಫಾರ್ಮರ್ ನಿರ್ವಹಣಾ ಅಭಿಯಾನ‌

Public TV
1 Min Read
Transformer 2

ಬೆಂಗಳೂರು: ರಾಜ್ಯಾದ್ಯಂತ ಮೇ 5 ರಿಂದ 20 ರವರೆಗೆ ಟ್ರಾನ್ಸ್‌ಫಾರ್ಮರ್‌ ನಿರ್ವಹಣಾ ಅಭಿಯಾನ ನಡೆಸಲು ಇಂಧನ ಇಲಾಖೆ ನಿರ್ಧರಿಸಿದೆ.

ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾನ್ಸ್‌ಫಾರ್ಮರ್ ಸಂಬಂಧಿತ ಅವಘಡ ತಪ್ಪಿಸುವುದಕ್ಕಾಗಿ ರಾಜ್ಯಾದ್ಯಂತ ಮೇ 5 ರಿಂದ 20 ರವರೆಗೆ ಟ್ರಾನ್ಸ್‌ಫಾರ್ಮರ್ ನಿರ್ವಹಣಾ ಅಭಿಯಾನ ನಡೆಸಲು ತೀರ್ಮಾನಿಸಿದೆ. ಕಳೆದ ಒಂದು ತಿಂಗಳಲ್ಲಿ ನಡೆದ ಟ್ರಾನ್ಸ್‌ಫಾರ್ಮರ್ ದುರಂತಗಳ ಹಿನ್ನೆಲೆಯಲ್ಲಿ ಈ ಅಭಿಯಾನ ನಡೆಸಲು ತೀರ್ಮಾನಿಸಲಾಗಿದ್ದು, ಎಲ್ಲ ಹಂತದ ಅಧಿಕಾರಿಗಳಿಗೂ ಈ ಅಭಿಯಾನದಲ್ಲಿ ಭಾಗವಹಿಸುವಂತೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ನೇಮಕಾತಿಯಲ್ಲಿ 300 ಕೋಟಿಗೂ ಅಕ್ರಮ: ಸಿದ್ದರಾಮಯ್ಯ ಬಾಂಬ್

ರಾಜ್ಯದಲ್ಲಿ ಹದಿನೈದು ವರ್ಷಕ್ಕಿಂತ ಹಳೆಯ ಪರಿವರ್ತಕಗಳು ಸಾಕಷ್ಟು ಪ್ರಮಾಣದಲ್ಲಿ ಇವೆ. ಮಳೆಗಾಲದಲ್ಲಿ ಅವುಗಳು ನಿರ್ವಹಣಾ ಸಮಸ್ಯೆ ಉಂಟಾಗುತ್ತಿವೆ. ಮಳೆಗಾಲದಲ್ಲಿ ಸಿಡಿಲು ಇತ್ಯಾದಿ ಕಾರಣಗಳಿಂದ ಪರಿವರ್ತಕಗಳ ಹಾನಿ ಸಾಧ್ಯತೆ ಇದೆ. ಜೊತೆಗೆ ಅಧಿಕ ಲೋಡ್‌ನಿಂದ ಟ್ರಾನ್ಸ್‌ಫಾರ್ಮರ್ ಹಾನಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಅಭಿಯಾನ ನಡೆಸಲಾಗುತ್ತಿದೆ.

VIDHAN SHOUDHA

ಅಭಿಯಾನದಲ್ಲಿ ಎಲ್ಲ ಹಂತದ ಅಧಿಕಾರಿಗಳೂ ಭಾಗಿಯಾಗಬೇಕು. ಪ್ರತಿ ದಿನ ಪರಿಶೀಲನೆ ನಡೆಸಿದ ಟ್ರಾನ್ಸ್‌ಫಾರ್ಮರ್‌ಗಳ ವಿವರ, ಅವುಗಳಲ್ಲಿ ಕಂಡುಬಂದ ನ್ಯೂನ್ಯತೆ, ಯಾವ ಕಾರಣಕ್ಕಾಗಿ ತೊಂದರೆ ಕಾಣಿಸಿಕೊಂಡಿದೆ ಎಂಬ ವಿವರವನ್ನು ಕೇಂದ್ರ ಕಚೇರಿಗೆ ಪ್ರತಿ ದಿನ ಕಳುಹಿಸಿಕೊಡುವಂತೆ ಸೂಚನೆ ನೀಡಲಾಗಿದೆ. ಪ್ರತಿ ವರ್ಷವೂ ಈ ರೀತಿ ಅಭಿಯಾನ ನಡೆಸುವುದರಿಂದ ಟ್ರಾನ್ಸ್‌ಫಾರ್ಮರ್‌ಗಳ ಕ್ಷಮತೆ ಹೆಚ್ಚಲಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆಗೆ ಆಗಸ್ಟ್ 15ರೊಳಗೆ ಶಂಕುಸ್ಥಾಪನೆ: ಬೊಮ್ಮಾಯಿ

ಟ್ರಾನ್ಸ್‌ಫಾರ್ಮರ್‌ಗಳ ರಿಪೇರಿಗೆ ಇಂಧನ ಇಲಾಖೆ ಪ್ರತಿವರ್ಷ 150 ಕೋಟಿ ರೂ. ವೆಚ್ಚ ಮಾಡುತ್ತದೆ. ನಿರ್ವಹಣಾ ಕೆಲಸವನ್ನು ಕಾಲ ಕಾಲಕ್ಕೆ ನಡೆಸಿದರೆ ರಿಪೇರಿ ವೆಚ್ಚ ತಗ್ಗಿಸುವುದಕ್ಕೆ ಸಾಧ್ಯವಿದೆ. ಜತೆಗೆ ಎಲ್ಲಿ ಹೊಸ ಟ್ರಾನ್ಸ್ ಫಾರ್ಮರ್‌ಗಳ ತುರ್ತು ಅಗತ್ಯವಿದೆ ಎಂಬುದನ್ನೂ ಈ ಅಭಿಯಾನದ ಮೂಲಕ ತಿಳಿದುಕೊಳ್ಳುವುದಕ್ಕೆ ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹದಿನೈದು ದಿನಗಳ‌ ಕಾಲ ಅಭಿಯಾನ ನಡೆಸಲು ಸೂಚನೆ ನೀಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *