ಚಿಕ್ಕೋಡಿ: ಅಧಿಕಾರ ಸಿಎಂ, ಡಿಸಿಎಂ ಸೇರಿ ಯಾರಿಗೂ ಶಾಶ್ವತ ಅಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ಅವರ ನಾನು ಸಾಮಾನ್ಯ ಕಾರ್ಯಕರ್ತನಾಗಿ ಇರ್ತೀನಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದರು. ನಾವೆಲ್ಲರೂ ಕೂಡಾ ಸಾಮಾನ್ಯ ಕಾರ್ಯಕರ್ತರು ಎಂದರು. ಇದನ್ನೂ ಓದಿ: ಸಿಎಂ ಬದಲಾವಣೆ ಗೊಂದಲದ ನಡುವೆ ಸಿದ್ದರಾಮಯ್ಯ ದೆಹಲಿಗೆ; ಹೈಕಮಾಂಡ್ ಜೊತೆ ನಡೆಯಲಿದ್ಯಾ ಪ್ರತ್ಯೇಕ ಮಾತುಕತೆ?
ಸಾಮಾನ್ಯ ಕಾರ್ಯಕರ್ತರಾಗಿಯೇ ಕೆಲಸ ಮಾಡಬೇಕು. ಅಧಿಕಾರ ಏನೂ ಬರುತ್ತೆ, ಅದು ನಮಗೆ ಶಾಶ್ವತ ಅಲ್ಲ. ಅದು ಸಿಎಂಗೆ ಆಗಲಿ, ಡಿಸಿಎಂಗೆ ಆಗಲಿ, ಮಂತ್ರಿಗಳಿಗಾಗಲಿ, ನಮಗಾಗಲಿ ಯಾರಿಗೂ ಶಾಶ್ವತ ಅಲ್ಲ. ಪಕ್ಷ ಕಟ್ಟೋ ಕೆಲಸ, ಪಕ್ಷ ಹೇಳುವ ಕೆಲಸ ಮಾಡಬೇಕು ಎಂದಿದ್ದಾರೆ.
ರಾಜ್ಯ ಕಾಂಗ್ರೆಸ್‌ನಲ್ಲಿ (Congress) ಮುಖ್ಯಮಂತ್ರಿ ಬದಲಾವಣೆ ಗೊಂದಲಗಳು ಮುಂದುವರಿದಿರುವ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ದೆಹಲಿಗೆ ತೆರಳಲಿದ್ದಾರೆ. ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಣಿಯಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದು, ಇದೇ ವೇಳೆ ಹೈಕಮಾಂಡ್ ನಾಯಕರನ್ನು ಪ್ರತ್ಯೇಕವಾಗಿ ಭೇಟಿಯಾಗುವ ಸಾಧ್ಯತೆ ಇದೆ. ಹೀಗಾಗಿ, ಸಿಎಂ ಬದಲಾವಣೆ ಗೊಂದಲಗಳ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆಯಾಗಲಿದೆಯೇ ಎಂಬ ಕುತೂಹಲ ಹೆಚ್ಚಾಗಿದೆ. ಈ ಬೆನ್ನಲ್ಲೇ ಯತೀಂದ್ರ ಅವರು ಈ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಸಲೀಂ ಹೊಟ್ಟೆಪಾಡಿಗಾಗಿ ಕೆಲಸ ಮಾಡ್ತಿದ್ದ, ಆತಂಕ ಪಡುವ ಅಗತ್ಯವಿಲ್ಲ: ಮಹದೇವಪ್ಪ

