ಕೋಲಾರ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಅಧಿಕಾರ ಹಂಚಿಕೆ ಒಪ್ಪಂದ ಮತ್ತೆ ಚರ್ಚೆಗೆ ಬಂದಿದ್ದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ (KH Muniyappa) ಸಹ ಬೆಂಬಲವಾಗಿ ನಿಂತಿದ್ದಾರೆ.
ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದು ಸರಿಯಾಗಿದೆ ಎನ್ನುವ ಮೂಲಕ ನನ್ನ ಬೇರೇನು ಕೇಳಬೇಡಿ ಎಂದು ಮುನಿಯಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ?- ಸೋಮವಾರ ಅಮಿತ್ ಶಾ ಜೊತೆ ನಿಖಿಲ್ ಚರ್ಚೆ
Advertisement
Advertisement
ಮುಳಬಾಗಿಲು ತಾಲೂಕಿನಲ್ಲಿ ಮುಖಂಡರೊಬ್ಬರ ಮನೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಸಂಪುಟ ಪುನಾರಚನೆ ಸದ್ಯಕ್ಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಬಿಜೆಪಿ ಹೆಚ್ಚು ಹೋರಾಟ ಮಾಡಿದಂತೆಲ್ಲಾ ಅದು ಕಾಂಗ್ರೆಸ್‌ಗೆ ಹೆಚ್ಚು ಅನುಕೂಲ. ರಾಜ್ಯದಲ್ಲಿ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಹೇಳಿದರು.