ವಿಜಯಪುರ: ಟೀ ಅಂಗಡಿ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಟೀ ಕುಡಿಯುತ್ತಿದ್ದ ಏಳು ಜನರಿಗೆ ವಿದ್ಯುತ್ ಪ್ರವಹಿಸಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಲತವಾಡ ಪಟ್ಟಣದಲ್ಲಿ ನಡೆದಿದೆ.
ಶನಿವಾರ ಸಂಜೆ ವೇಳೆ ಬೀಸಿದ ಬಿರುಗಾಳಿ ವೇಳೆ ನಲತವಾಡನ ಟೀ ಅಂಗಡಿಯ ತಗಡಿನ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಆಗ ತಗಡಿನ ಮೂಲಕ ವಿದ್ಯುತ್ ಹರಿದ ಪರಿಣಾಮ ಇಬ್ಬರಿಗೆ ತೀವ್ರ ಗಾಯವಾಗಿದ್ದು, ಐವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಗದ್ದೆಪ್ಪ ಬಂಡಿವಡ್ಡರ, ಶಿವಪ್ಪ ವಡ್ಡರಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಉಳಿದ ಐವರನ್ನು ನಲತವಾಡ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅವಘಡಕ್ಕೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.