ಕೋಲಾರ: ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಕೋಲಾರ ಜಿಲ್ಲೆಗೆ ಆಗಮಿಸಿದ್ದಾರೆ.
ಪವನ್ ಕಲ್ಯಾಣ್ ಅವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಗೌನಿಪಲ್ಲಿ ಗ್ರಾಮಕ್ಕೆ ಬಂದಿದ್ದಾರೆ. ಪವನ್ ಅವರು ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ವಿಮಾನ ಗೋಪುರ ಮಹಾಕುಂಬಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
Advertisement
Advertisement
ಈ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಶ್ರೀ ನಂಜಾವದೂತ ಮಹಾಸ್ವಾಮೀಜಿ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಮಾಜಿ ವಿಧಾನಸಭಾ ಅಧ್ಯಕ್ಷರು ಕೆ.ಆರ್ ರಮೇಶ್ ಕುಮಾರ್ ಪಾಲ್ಗೊಂಡಿದ್ದಾರೆ. ಪವನ್ ಕಲ್ಯಾಣ್ ಅವರನ್ನು ನೋಡಲು ಸಾವಿರಾರು ಜನರು ಮುಗಿಬಿದ್ದಿದ್ದಾರೆ.
Advertisement
Advertisement
ಮಹೋತ್ಸವದಲ್ಲಿ ಭಾಗಿಯಾದ ನಂತರ ಪವನ್ ಕಲ್ಯಾಣ್ ವೇದಿಕೆ ಮೇಲೆ ಆಗಮಿಸಿದರು. ಈ ವೇಳೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ನೂಕುನುಗ್ಗಲು ಮಾಡಿದ್ದಾರೆ. ಜನರ ನೂಕುನುಗ್ಗಲು ನೋಡಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.