ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ನಮ್ಮನ್ನಗಲಿ ಇಂದಿಗೆ 4 ವರ್ಷ.
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ 4ನೇ ಪುಣ್ಯಸ್ಮರಣೆ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪುನೀತ್ ಸಮಾಧಿಗೆ ಬಣ್ಣ ಬಣ್ಣದ ಗುಲಾಬಿ ಹೂವಿನ ಅಲಂಕಾರ ಮಾಡಲಾಗಿದೆ. ದೊಡ್ಮನೆ ಕುಟುಂಬ ಬೆಳಗ್ಗೆ 9:30ರ ಸುಮಾರಿಗೆ ಪುನೀತ್ ಸಮಾಧಿಗೆ ಪೂಜೆ ನೆರವೇರಿಸಲಿದ್ದು, ಇಷ್ಟದ ಖಾದ್ಯಗಳನ್ನಿಟ್ಟು ಪೂಜೆ ಮಾಡಲಿದ್ದಾರೆ.ಇದನ್ನೂ ಓದಿ:ಆಂಧ್ರ ಕರಾವಳಿಗೆ ಅಪ್ಪಳಿಸಿದ ಮೊಂಥಾ ಚಂಡಮಾರುತ
ಅಪ್ಪು ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬಳಿ ಇಂದು ಇಡೀ ದಿನ ಅನ್ನಸಂತರ್ಪಣೆ ಜೊತೆಗೆ ನೇತ್ರದಾನ, ರಕ್ತದಾನ ಶಿಬಿರಗಳ ಆಯೋಜನೆ ಮಾಡಿಕೊಂಡಿದ್ದಾರೆ. ರಾಜ್ಯದ ಮೂಲೆ ಮೂಲಗಳಿಂದ ಅಭಿಮಾನಿಗಳು ಆಗಮಿಸಿ, ಅಪ್ಪುಗೆ ನಮನ ಸಲ್ಲಿಸಲಿದ್ದಾರೆ. ಅಲ್ಲದೇ, ರಾಜ್ಯಾದ್ಯಂತ ಅವರ ಅಭಿಮಾನಿಗಳು ತಾವಿರುವ ಸ್ಥಳದಿಂದಲೇ ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ.



