Bengaluru CityCinemaDistrictsKarnatakaLatestSandalwood

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬಕ್ಕೆ ಬ್ರೇಕ್

Advertisements

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಮಾರ್ಚ್ 17ರಂದು 44ನೇ ವಸಂತಕ್ಕೆ ಕಾಲಿಡಲಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಮೊದಲ ಬಲಿ ಹಿನ್ನೆಲೆಯಲ್ಲಿ ಈ ವರ್ಷ ಅವರ ಹುಟ್ಟುಹಬ್ಬಕ್ಕೆ ಬ್ರೇಕ್ ಬಿದ್ದಿದೆ.

ಪ್ರತಿ ವರ್ಷ ಪುನೀತ್ ರಾಜ್‍ಕುಮಾರ್ ಅವರ ಹುಟ್ಟುಹಬ್ಬಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅವರ ಮನೆ ಮುಂದೆ ಸೇರುತ್ತಾರೆ. ಹೆಚ್ಚಿನ ಜನ ಸೇರುವ ಹಿನ್ನೆಲೆಯಲ್ಲಿ ಪುನೀತ್ ಈ ವರ್ಷ ಹುಟ್ಟುಹಬ್ಬ ಮಾಡಿಕೊಳ್ಳದಿರಲು ತೀರ್ಮಾನಿಸಿದ್ದಾರೆ.

ಈ ಬಗ್ಗೆ ಪುನೀತ್ ಅವರು ಇಂದು ಅಥವಾ ನಾಳೆ ಪತ್ರಿಕಾಗೋಷ್ಠಿ ಕರೆಯಲಿದ್ದಾರೆ. ಸದ್ಯ ಪುನೀತ್ ಅವರ ಅಭಿಮಾನಿಗಳು ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಲ್ಲಿ ಅನ್ನ ಸಂತರ್ಪಣೆ ಮಾಡವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಲಿದ್ದಾರೆ.

ಪುನೀತ್ ರಾಜ್‍ಕುಮಾರ್ ಅವರು ತಮ್ಮ ಕುಟುಂಬಸ್ಥರ ಜೊತೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ ಎಂಬ ವಿಷಯ ಮೂಲಗಳಿಂದ ತಿಳಿದಿದೆ. ಸದ್ಯ ಅಭಿಮಾನಿಗಳ ಆರೋಗ್ಯ ಹಾಗೂ ತಮ್ಮ ಆರೋಗ್ಯದ ಕಾಳಜಿಯಿಂದ ಪುನೀತ್ ಅವರು ತಮ್ಮ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪುನೀತ್ ರಾಜ್‍ಕುಮಾರ್ ನಟಿಸುತ್ತಿರುವ `ಯುವರತ್ನ` ಸಿನಿಮಾ ಬಾರೀ ನಿರೀಕ್ಷೆ ಹುಟ್ಟುಹಾಕಿದೆ. ಯುವರತ್ನ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಹಾಡೊಂದರ ಚಿತ್ರೀಕರಣಕ್ಕಾಗಿ ಚಿತ್ರತಂಡ ಯುರೋಪ್‍ಗೆ ತೆರಳಲು ಪ್ಲಾನ್ ಮಾಡಿಕೊಂಡಿತ್ತು. ಯುರೋಪ್‍ನ ಸ್ಲೋವೇನಿಯಾದಲ್ಲಿ ಹಾಡಿನ ಚಿತ್ರೀಕರಣ ಮಾಡಲು ಚಿತ್ರತಂಡ ಮುಂದಾಗಿತ್ತು.

3-4 ದಿನಗಳ ಕಾಲ ಯುರೋಪಿನಲ್ಲೇ ಚಿತ್ರತಂಡ ತಂಗಲು ಪ್ಲಾನ್ ಮಾಡಿದ್ದ ಹಿನ್ನೆಲೆ ಟಿಕೆಟ್, ಹೋಟೆಲ್ ಎಲ್ಲವೂ ಬುಕ್ ಮಾಡಲಾಗಿತ್ತು. ಆದರೆ ಮಹಾಮಾರಿ ಕೊರೊನಾ ಭೀತಿಯಿಂದ `ಯುವರತ್ನ`ನ ಯುರೋಪ್ ಪ್ರವಾಸ ರದ್ದು ಮಾಡಿತ್ತು. ಹಣ ಹೋದರೆ ಹೋಗಲಿ ಕೊರೊನಾ ಸಹವಾಸ ಬೇಡಪ್ಪ ಎಂದು ಚಿತ್ರತಂಡ ನಿರ್ಧರಿಸಿತ್ತು.

Leave a Reply

Your email address will not be published.

Back to top button