ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಕರುಣಾನಿಧಿ ಅವರ ಮನೆಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.
ಪುನೀತ್ ರಾಜ್‍ಕುಮಾರ್ ಚೆನ್ನೈನ ಗೋಪಾಲಪುರಂನಲ್ಲಿರುವ ಕರುಣಾನಿಧಿ ಅವರ ಮನೆಗೆ ಭೇಟಿ ನೀಡಿ ಅವರ ಮಗ ಸ್ಟಾಲಿನ್ ಹಾಗೂ ಕುಟುಂಬಸ್ಥರ ಜೊತೆ ಮಾತನಾಡಿ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
Advertisement
ಕರುಣಾನಿಧಿ ಅವರ ಮನೆಗೆ ಭೇಟಿ ನೀಡಿದ ಬಳಿಕ ಪುನೀತ್ ಮಾಧ್ಯಮಗಳ ಜೊತೆ ಮಾತನಾಡಿ, “ಕರುಣಾನಿಧಿ ದಿಗ್ಗಜ ನಾಯಕ. ಅವರ ನಿಧನಕ್ಕೆ ಸಂತಾಪ ಸೂಚಿಸಬೇಕಾಗಿರುವುದು ನಮ್ಮ ಕರ್ತವ್ಯ. ಹಾಗಾಗಿ ಅವರ ಮನೆಗೆ ಬಂದಿದ್ದೇನೆ. ನಮ್ಮ ತಂದೆ ರಾಜ್‍ಕುಮಾರ್ ಕಿಡ್ನಾಪ್ ಆಗಿದ್ದ ವೇಳೆ ಕರುಣಾನಿಧಿ ನಮಗೆ ತುಂಬಾ ಸಹಾಯ ಮಾಡಿದ್ದರು. ಅಂದಿನಿಂದ ಕರುಣಾನಿಧಿ ಅವರ ಕುಟುಂಬದ ಜೊತೆ ನಮ್ಮ ಕುಟುಂಬದ ಒಳ್ಳೆಯ ನಂಟು ಹೊಂದಿದೆ. ನಾನು ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಲು ಬಂದೆ ಎಂದು ಪುನೀತ್ ಹೇಳಿದರು.
Advertisement
Advertisement
ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಮಂಗಳವಾರ (7.8.2018) ವಿಧಿವಶರಾಗಿದ್ದರು. ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ 6.10ಕ್ಕೆ ಕೊನೆಯುಸಿರೆಳೆದಿದ್ದಾರೆ.
Advertisement
ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv