CinemaKarnatakaLatestSandalwood

ಅಭಿಮಾನಿಗಳಿಗೆ ಪವರ್ ಸ್ಟಾರ್ ಕಡೆಯಿಂದ ಗುಡ್‍ನ್ಯೂಸ್!

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ‘ನಟಸಾರ್ವಭೌಮ’ ಚಿತ್ರದ ರಿಲೀಸ್ ದಿನಾಂಕ ಪ್ರಕಟಗೊಂಡಿದ್ದು, ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಪುನೀತ್ ರಾಜ್‍ಕುಮಾರ್ ನಟನೆಯ ನಟಸಾರ್ವಭೌಮ ರಿಲೀಸ್ ಡೇಟ್ ಫಿಕ್ಸ್ ಆಗಿದ್ದು, ಈ ಅಕ್ಟೋಬರ್ ನಲ್ಲಿ ಸಿನಿಮಾ ತೆರೆ ಕಾಣಲಿದೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

ಅಕ್ಟೋಬರ್ 5 ರಂದು ದಸರಾ ಹಬ್ಬದ ಪ್ರಯುಕ್ತ ಈ ಸಿನಿಮಾ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ರಾಕ್‍ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದು, ಡಿಂಪಲ್ ಬೆಡಗಿ ರಚಿತಾ ರಾಮ್ ಪುನೀತ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಈ ಸಿನಿಮಾ ಶೇ.50ರಷ್ಟು ಚಿತ್ರೀಕರಣ ಮುಗಿದಿದೆ.

ಈ ಮೊದಲು ರಚಿತಾ ರಾಮ್, ಪುನೀತ್ ಜೊತೆ ‘ಚಕ್ರವ್ಯೂಹ’ ಚಿತ್ರದಲ್ಲಿ ನಟಿಸಿದ್ದರು. ಈಗ ನಟಸಾರ್ವಭೌಮ ಚಿತ್ರದ ಮೂಲಕ ಮತ್ತೊಮ್ಮೆ ಪುನೀತ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಮಲೆಯಾಳಂ ನಟಿ ಅನುಪಮಾ ಪರಮೇಶ್ವರನ್ ಕೂಡ ಪುನೀತ್ ಅವರ ಜೊತೆ ನಟಿಸುತ್ತಿದ್ದಾರೆ.

ಪವನ್ ಒಡೆಯರ್ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರಕ್ಕೆ ಡಿ ಇಮ್ಮನ್ ಸಂಗೀತ ನೀಡುತ್ತಿದ್ದಾರೆ. ಚಿಕ್ಕಣ್ಣ, ಅಚ್ಯುತ್ ಕುಮಾರ್, ಬಿ. ಸರೋಜದೇವಿ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸುತ್ತಿದ್ದಾರೆ.

Leave a Reply

Your email address will not be published. Required fields are marked *

Back to top button