Sunday, 22nd September 2019

ಪ್ರಭಾಸ್‍ಗಾಗಿ ಮೊಬೈಲ್ ಟವರ್ ಏರಿ ಅಭಿಮಾನಿಯಿಂದ ಆತ್ಮಹತ್ಯೆಗೆ ಯತ್ನ

ಹೈದರಾಬಾದ್: ಡಾರ್ಲಿಂಗ್ ಪ್ರಭಾಸ್‍ಗಾಗಿ ಅಭಿಮಾನಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತೆಲಂಗಾಣದ ಜಂಗಮ್‍ನಲ್ಲಿ ನಡೆದಿದೆ.

ಪ್ರಭಾಸ್ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎಂದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಭಿಮಾನಿ ಬೆದರಿಕೆ ಹಾಕಿದ್ದನು. ಅಲ್ಲದೆ ಸ್ಥಳಕ್ಕೆ ಪ್ರಭಾಸ್ ಬರಬೇಕು ಎಂದು ಹಠ ಹಿಡಿದಿದ್ದನು. ಆತನನ್ನು ಕೆಳಗೆ ಇಳಿಸಲು ಸ್ಥಳೀಯರು ಹಾಗೂ ಅಧಿಕಾರಿಗಳು ಸಾಕಷ್ಟು ಪ್ರಯತ್ನ ನಡೆಸಿದ್ದರು.

ಸ್ಥಳೀಯರು ಹಾಗೂ ಅಧಿಕಾರಿಗಳು ಎಷ್ಟೇ ಹೇಳಿದರೂ ಯುವಕ ಕೆಳಗೆ ಇಳಿಯಲು ನಿರಾಕರಿಸುತ್ತಿದ್ದನು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಆದರೆ ಆತನನ್ನು ಟವರ್‌ನಿಂದ ಕೆಳಗೆ ಇಳಿಸಲು ಪೊಲೀಸರು ಸಾಕಷ್ಟು ಪ್ರಯತ್ನಪಟ್ಟಿದ್ದಾರೆ. ಅಲ್ಲದೆ ಈ ಘಟನೆ ಬಗ್ಗೆ ಪ್ರಭಾಸ್ ಅವರಿಗೆ ಮಾಹಿತಿ ನೀಡಿದ್ದಾರಾ ಎಂಬ ವಿಷಯದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಬಾಹುಬಲಿ ಚಿತ್ರ ಬಿಡುಗಡೆಯಾದ ನಂತರ ಪ್ರಭಾಸ್ ಅವರಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಬಿಡುಗಡೆಯಾದ ‘ಸಾಹೋ’ ಚಿತ್ರ ಕೇವಲ 10 ದಿನದಲ್ಲಿ 450 ಕೋಟಿ ರೂ. ಬಾಕ್ಸ್ ಆಫೀಸ್‍ನಲ್ಲಿ ಕಲೆಕ್ಷನ್ ಆಗಿದೆ. ಸಾಹೋ ಚಿತ್ರವನ್ನು ನಿರ್ದೇಶಕ ಸುಜೀತ್ ನಿರ್ದೇಶನ ಮಾಡಿದ್ದು, ವಂಶಿ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಈ ಚಿತ್ರದಲ್ಲಿ ನೀಲ್ ನಿತಿನ್ ಮುಖೇಶ್, ಮಂದಿರಾ ಬೇಡಿ ಹಾಗೂ ಜಾಕಿ ಶ್ರಾಫ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

Leave a Reply

Your email address will not be published. Required fields are marked *