CinemaLatestMain PostSouth cinema

ಪ್ರಭಾಸ್ ನಟನೆಯ `ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ಸ್ಟಾರ್ಟ್

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ `ಸಲಾರ್ ನಂತರ `ಪ್ರಾಜೆಕ್ಟ್ ಕೆ’ ಸಿನಿಮಾಗಾಗಿ ರೆಡಿಯಾಗ್ತಿದ್ದಾರೆ. ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ `ಪ್ರಾಜೆಕ್ಟ್ ಕೆ’ ಶೂಟಿಂಗ್‌ಗೆ ಭರ್ಜರಿ ತಯಾರಿ ನಡೆಯುತ್ತಿದೆ. ಹೊಸ ಗೆಟಪ್‌ನಲ್ಲಿ ಮಿಂಚಲು ಬಾಹುಬಲಿ ಸ್ಟಾರ್ ರೆಡಿಯಾಗಿದ್ದಾರೆ.

ನಾಗ ಅಶ್ವೀನ್ ನಿರ್ದೇಶನದಲ್ಲಿ ಮೂಡಿ ಬರಲಿರುವ `ಪ್ರಾಜೆಕ್ಟ್ ಕೆ’ ಚಿತ್ರಕ್ಕಾಗಿ ಪ್ರಭಾಸ್ ಸಜ್ಜಾಗಿದ್ದಾರೆ. ಚಿತ್ರದ ಪ್ರಭಾಸ್ ಪಾತ್ರದ ಪೋರ್ಷನ್ ಮಾತ್ರ ಒಂದು ವಾರಗಳ ಕಾಲ ಚಿತ್ರೀಕರಣ ಮಾಡಿಕೊಳ್ಳಲು ಟೀಮ್ ಪ್ಲ್ಯಾನ್ ಮಾಡಿಕೊಂಡಿದೆ. ಹೈದರಾಬಾದ್‌ನಲ್ಲಿ `ಪ್ರಾಜೆಕ್ಟ್ ಕೆ’ ಶೂಟಿಂಗ್ ಶುರುವಾಗಲಿದೆ.ಇದನ್ನೂ ಓದಿ: ನಾಳೆ ರಾಮ್ ಗೋಪಾಲ್ ವರ್ಮಾ ಮತ್ತು ಉಪೇಂದ್ರ ಕಾಂಬಿನೇಷನ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್

`ಪ್ರಾಜೆಕ್ಟ್ ಕೆ’ ಚಿತ್ರದಲ್ಲಿ ಪ್ರಭಾಸ್‌ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಕಾಣಿಸಿಕೊಳ್ತಿದ್ದು, ಚಿತ್ರರಂಗದ ದಂತಕಥೆ ಅಮಿತಾಭ್ ಬಚ್ಚನ್ ಪವರ್‌ಫುಲ್ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಒಟ್ಟಾರೆ ಈ ಮೂರು ಸ್ಟಾರ್ ಜುಗಲ್‌ಬಂದಿ ತೆರೆಯ ಮೇಲೆ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.

Leave a Reply

Your email address will not be published.

Back to top button