Connect with us

Cinema

ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದ ಪ್ರಭಾಸ್

Published

on

ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಸಾಮಾಜಿಕ ಜಾಲತಾಣದಲ್ಲಿ ಹೊಸದೊಂದು ದಾಖಲೆ ನಿರ್ಮಿಸಿದ್ದಾರೆ. ಇನ್‍ಸ್ಟಾಗ್ರಾಂ ಖಾತೆ ತೆರೆದ ಒಂದೇ ದಿನವೇ 7 ಲಕ್ಷ ಅಭಿಮಾನಿಗಳು ಪ್ರಭಾಸ್ ಅವರನ್ನು ಫಾಲೋ ಮಾಡುತ್ತಿದ್ದಾರೆ. ಈ ಮೂಲಕ ಇನ್‍ಸ್ಟಾಗ್ರಾಂನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ಭಾರತದ ಸೆಲೆಬ್ರಿಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಹಿಂದೆ ಅಂದರೆ 2018ರಲ್ಲಿ ಕಣ್ಸನೆ ಬೆಡಗಿ ಪ್ರಿಯಾ ವಾರಿಯಾರ್ ಒಂದೇ ದಿನದಲ್ಲಿ 6 ಲಕ್ಷ ಫಾಲೋವರ್ಸ್ ಪಡೆದು ದಾಖಲೆ ಬರೆದಿದ್ದರು. ಈಗ ಪ್ರಭಾಸ್ ಒಂದೇ ದಿನದಲ್ಲಿ 7 ಲಕ್ಷ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಪ್ರಭಾಸ್ ಶನಿವಾರ ಇನ್‍ಸ್ಟಾಗ್ರಾಂ ಖಾತೆಯನ್ನು ತೆರೆದಿದ್ದಾರೆ. ಆದರೆ ಪ್ರಭಾಸ್ ಇನ್‍ಸ್ಟಾಗ್ರಾಂ ಖಾತೆ ತೆರೆದು ಕೆಲವು ಗಂಟೆಗಳಲ್ಲಿ 7 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಫಾಲೋ ಮಾಡುತ್ತಿದ್ದಾರೆ. ಈ ಮೂಲಕ ಪ್ರಭಾಸ್ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದಿದ್ದಾರೆ.

ಪ್ರಭಾಸ್ ಇನ್‍ಸ್ಟಾಗ್ರಾಂ ಖಾತೆ ಮಾತ್ರ ತೆರೆದಿದ್ದಾರೆ. ಆದರೆ ಇಲ್ಲಿಯವರೆಗೂ ಅವರು ತಮ್ಮ ಖಾತೆಯಲ್ಲಿ ಯಾವುದೇ ಫೋಟೋ ಅಥವಾ ವಿಡಿಯೋಗಳನ್ನು ಹಂಚಿಕೊಂಡಿಲ್ಲ. ಪ್ರಭಾಸ್ ಯಾವುದೇ ಫೋಟೋ ಅಥವಾ ವಿಡಿಯೋ ಪೋಸ್ಟ್ ಮಾಡದೇ ಇದ್ದರೂ ಅಭಿಮಾನಿಗಳು ಅವರನ್ನು ಫಾಲೋ ಮಾಡುತ್ತಿದ್ದಾರೆ. ಪ್ರಭಾಸ್ ಇನ್‍ಸ್ಟಾಗ್ರಾಂನಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಿದರೆ ಫಾಲೋವರ್ಸ್ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ.

ಪ್ರಭಾಸ್ ಬಾಹುಬಲಿ ಚಿತ್ರದ ಯಶಸ್ಸಿನ ನಂತರ ತಮ್ಮ ಮುಂದಿನ ‘ಸಾಹೋ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಸಮಯದಿಂದ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪ್ರಭಾಸ್‍ಗೆ ನಾಯಕಿಯಾಗಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ನಟಿಸುತ್ತಿದ್ದಾರೆ. ಅಲ್ಲದೆ ಈ ಚಿತ್ರದಲ್ಲಿ ಬಾಲಿವುಡ್ ಕಲಾವಿದರಾದ ಜಾಕಿ ಶ್ರಾಫ್ ಹಾಗೂ ನೀಲ್ ನಿತಿನ್ ಮುಕೇಶ್ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ.

‘ಸಾಹೋ’ ಚಿತ್ರ ಇದೇ ವರ್ಷ ಅಗಸ್ಟ್ 15 ಸ್ವತಂತ್ರ್ಯ ದಿನಾಚರಣೆಯಂದು ಬಿಡುಗಡೆ ಆಗಲಿದೆ.