ಡಾ.ರಾಜ್‌ಕುಮಾರ್ ನಟನೆಯ ‘ಬೇಡರ ಕಣ್ಣಪ್ಪ’ ಸಿನಿಮಾ ತೆಲುಗಿನಲ್ಲಿ ರಿಮೇಕ್ ಆಗುತ್ತಿದೆ. ಹೊಸ ರೂಪದಲ್ಲಿ ‘ಭಕ್ತ ಕಣ್ಣಪ್ಪ’ ಸಿನಿಮಾವಾಗಿ ಮೂಡಿ ಬರಲಿದ್ದು, ಬಾಹುಬಲಿ ಪ್ರಭಾಸ್ (Prabhas) ಪ್ರಮುಖ ಪಾತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದನ್ನೂ ಓದಿ:ಮಗು ಮಾಡಿಕೊಳ್ಳುವ ಬಗ್ಗೆ ಪ್ಲ್ಯಾನ್ ಇಲ್ವಾ- ವಿಕ್ಕಿ ಕೌಶಲ್ ಹೇಳೋದೇನು?

❤️ Har Har Mahadev ❤️ #Kannappa ???? https://t.co/GXbSbayFrX
— Vishnu Manchu (@iVishnuManchu) September 10, 2023
ಕಣ್ಣಪ್ಪ ಕುರಿತ ಸಿನಿಮಾದಲ್ಲಿ ನಟ ಪ್ರಭಾಸ್ ನಟಿಸುವುದು ಪಕ್ಕಾ ಆಗಿದೆ. ಆದರೆ ಅವರಿಲ್ಲಿ ಕಣ್ಣಪ್ಪನ ಪಾತ್ರ ಮಾಡುತ್ತಿಲ್ಲ. ಬದಲಿಗೆ, ಆ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಲಿದ್ದಾರೆ. ಹೌದು, ಕಣ್ಣಪ್ಪನ ಸಿನಿಮಾದಲ್ಲಿ ಪ್ರಭಾಸ್ ಅವರು ಶಿವನ ಪಾತ್ರ ಮಾಡಲಿದ್ದಾರೆ. ಈ ಮೂಲಕ ದೊಡ್ಡಪ್ಪನ ಕನಸನ್ನು ಪ್ರಭಾಸ್ ನನಸು ಮಾಡುತ್ತಿರೋದಕ್ಕೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
‘ಭಕ್ತ ಕಣ್ಣಪ್ಪ’ (Bhakta Kannappa) ಸಿನಿಮಾವನ್ನು ಹೊಸ ರೂಪದಲ್ಲಿ ನಟ ಮಂಚು ವಿಷ್ಣು (Manchu Vishnu) ನಿರ್ಮಾಣ ಮಾಡುತ್ತಿದ್ದಾರೆ. ಕಣ್ಣಪ್ಪನ ಪಾತ್ರದಲ್ಲಿ ಮಂಚು ವಿಷ್ಣು ನಟಿಸಲಿದ್ದಾರೆ. 150 ಕೋಟಿ. ರೂ ಬಜೆಟ್‌ನಲ್ಲಿ ಸಿನಿಮಾ ಮೂಡಿ ಬರಲಿದೆ. ಸದ್ಯದಲ್ಲೇ ಚಿತ್ರತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಲಿದೆ.

