ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್- ಪ್ರಭಾಸ್ ಕಾಂಬಿನೇಷನ್‌ನ ‘ಸಲಾರ್’ (Salaar) ಸಿನಿಮಾದ ಮೊದಲ ಹಾಡು ಇಂದು ಬಿಡುಗಡೆ ಆಗಿದೆ. ಒಟ್ಟು ಐದು ಭಾಷೆಗಳಲ್ಲಿ ಹಾಡು ಬಿಡುಗಡೆಯಾಗಿದೆ. ಮೊದಲ ಹಾಡಿಗೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಪೃಥ್ವಿರಾಜ್-ಪ್ರಭಾಸ್ (Prabhas) ಹಾಡು ಫ್ಯಾನ್ಸ್‌ಗೆ ಮೋಡಿ ಮಾಡಿದೆ.
Advertisement
‘ಆಕಾಶ ಗಡಿಯದಾಟಿ ತಂದಾನೋ ಬೆಳಕ ಕೋಟಿ’ ಎಂಬ ಹಾಡು ಕೆಜಿಎಫ್ ಸಾಂಗ್ ನೆನಪಿಸಿದೆ. ಸಲಾರ್‌ನಲ್ಲೂ ತಾಯಿ- ಮಗನ ಬಾಂಧವ್ಯ ತೋರಿಸಲಾಗಿದೆ. ಇಲ್ಲೂ ಕೆಜಿಎಫ್ ರವಿ ಬಸ್ರೂರು ಮ್ಯೂಸಿಕ್ ಮ್ಯಾಜಿಕ್ ಮಾಡಿದೆ. ಒಟ್ನಲ್ಲಿ ಸಲಾರ್ ಫಸ್ಟ್ ಸಾಂಗ್ ಅಭಿಮಾನಿಗಳಿಗೆ ಕಿಕ್ ಕೊಟ್ಟಿರೋದಂತೂ ನಿಜ.
Advertisement
Advertisement
ಪ್ರಭಾಸ್ ಅಲ್ಲದೇ, ‘ಸಲಾರ್’ (Salaar) ಸಿನಿಮಾದಲ್ಲಿ ಮಲಯಾಳಂನ ಹೆಸರಾಂತ ನಟ ಪೃಥ್ವಿರಾಜ್ ಸುಕುಮಾರನ್ ಹೊಸಬಗೆಯ ಪಾತ್ರ ಮಾಡಿದ್ದಾರೆ. ಐದು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬಂದಿದ್ದು ವಿಶೇಷವೆಂದರೆ ತಮ್ಮ ಪಾತ್ರಕ್ಕೆ ಐದೂ ಭಾಷೆಗಳಲ್ಲಿ ತಾವೇ ಡಬ್ ಮಾಡಿದ್ದಾರಂತೆ ಪೃಥ್ವಿರಾಜ್. ಇದನ್ನೂ ಓದಿ:Yash: ‘ಟಾಕ್ಸಿಕ್’ಗೆ ಶೃತಿ ಹಾಸನ್, ಜೆರೆಮಿಸ್ಟಾಕ್ ಸಾಥ್
Advertisement
ಈಗಾಗಲೇ ಸಿನಿಮಾ ರಿಲೀಸ್‌ಗೆ ಸರ್ವಸಿದ್ಧತೆ ನಡೆದಿದೆ. ಈ ನಡುವೆ ಸಲಾರ್ ಸಿನಿಮಾಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ನೀಡಿದೆ. ತೀವ್ರಗತಿಯ ಸಾಹಸ ಸನ್ನಿವೇಶಗಳು ಇರುವ ಕಾರಣದಿಂದಾಗಿ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ಸೆನ್ಸಾರ್ ಮಂಡಳಿ ನೀಡಿದೆ. ಭಾರತದಲ್ಲಿನ ಪ್ರದರ್ಶನಕ್ಕಾಗಿ ‘ಎ’ ಮತ್ತು ಹೊರ ದೇಶದಲ್ಲಿನ ಪ್ರದರ್ಶನಕ್ಕಾಗಿ ಯು/ಎ ಪ್ರಮಾಣ ಪತ್ರ ಸಿಕ್ಕಿದೆ ಎನ್ನಲಾಗುತ್ತಿದೆ. ಸಿನಿಮಾದ ಒಟ್ಟು ಅವಧಿ 2 ಗಂಟೆ 55 ನಿಮಿಷ ಎಂದು ಹೇಳಲಾಗುತ್ತಿದೆ.
ನಾನಾ ಕಾರಣಗಳಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ. ಡಾರ್ಲಿಂಗ್ ಪ್ರಭಾಸ್ ನಾಯಕತ್ವದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊನ್ನೆಯಷ್ಟೇ ‘ಸಲಾರ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಫ್ರೆಂಡ್‌ಶಿಪ್ ಜೊತೆ ಸೇಡಿನ ಕಥೆ ಹೊಂದಿರುವ ಈ ಸಿನಿಮಾದಲ್ಲಿ ರಕ್ತ ಸಿಕ್ತವಾಗಿ ಪ್ರಭಾಸ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್‌ಗೆ ನಾಯಕಿಯಾಗಿ ಶ್ರುತಿ ಹಾಸನ್ (Shruti Haasan) ನಟಿಸಿದ್ದಾರೆ. 3 ನಿಮಿಷ 47 ಸೆಕೆಂಡ್ ಇರುವ ಈ ಟ್ರೈಲರ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಆ ಟ್ರೈಲರ್ ನೋಡಿದಾಗಲೇ ಚಿತ್ರಕ್ಕೆ ಯಾವ ಪ್ರಮಾಣ ಪತ್ರ ಸಿಗಬಹುದು ಎಂದು ಅಂದಾಜಿಸಲಾಗಿತ್ತು.