ಹಾಲಿವುಡ್ ನಲ್ಲೂ ಪ್ರಭಾಸ್ ನಟನೆಯ ‘ಕಲ್ಕಿ’ ರಿಲೀಸ್

Public TV
1 Min Read
Kalki 1

ಪ್ರಭಾಸ್ ನಟನೆಯ ಕಲ್ಕಿ ಸಿನಿಮಾದ ರಿಲೀಸ್ (Release) ಡೇಟ್ ಅಧಿಕೃತವಾಗಿ ಘೋಷಣೆಯಾಗಿದೆ. ಇದೇ ಜೂನ್ 27ರಂದು ವಿಶ್ವದಾದ್ಯಂತ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದೆ. ಜೊತೆಗೆ ಹೊಸ ಪೋಸ್ಟರ್ ಕೂಡ ರಿಲೀಸ್ ಮಾಡಿದೆ. ಭಾರತದ ಭಾಷೆಗಳಿಗೆ ಅಷ್ಟೇ ಅಲ್ಲ, ಇಂಗ್ಲಿಷ್ ಗೂ ಈ ಸಿನಿಮಾ ಡಬ್ ಆಗಿ ಹಾಲಿವುಡ್ (Hollywood) ನಲ್ಲೂ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Kalki

ಈ ಸಿನಿಮಾ ಒಂದಿಲ್ಲೊಂದು ಕಾರಣದಿಂದಾಗಿ ಸುದ್ದಿ ಆಗುತ್ತಲೇ ಇದೆ. ಈ ಬಾರಿ ಕಲಾವಿದರಿಗೆ ನೀಡಿರುವ ಸಂಭಾವನೆಯಿಂದಾಗಿ (Remuneration) ಸಖತ್ ಸದ್ದು ಮಾಡುತ್ತಿದೆ. ಮೂಲಗಳ ಪ್ರಕಾರ ಕಲಾವಿದರಿಗಾಗಿಯೇ ಒಟ್ಟು 250 ಕೋಟಿ ರೂಪಾಯಿಗೂ ಅಧಿಕ ಖರ್ಚು ಮಾಡಿದ್ದಾರಂತೆ ನಿರ್ಮಾಪಕರು. ಅದರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದಿರೋದು ಚಿತ್ರ ನಾಯಕ ಪ್ರಭಾಸ್.

Kalki 3

ಪ್ರಭಾಸ್‌ (Prabhas) ಈ ಸಿನಿಮಾಗಾಗಿ ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರಂತೆ.  ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್‌ ಹಾಸನ್‌ ತಲಾ 20 ಕೋಟಿ ರೂಪಾಯಿ ಸಂಭಾವನೆ ಜೇಬಿಗಿಳಿಸಿಕೊಂಡಿದ್ದಾರೆ. ನಾಯಕಿ ದಿಶಾ ಪಟಾಣಿ 5 ಕೋಟಿ ರೂಪಾಯಿಗೆ ತೃಪ್ತಿ ಪಟ್ಟಿದ್ದಾರೆ. ಲಕ್ಷದಲ್ಲಿ ಸಂಭಾವನೆ ಪಡೆಯುವ ಅನೇಕ ನಟರೂ ಈ ಸಿನಿಮಾದಲ್ಲಿ ಇದ್ದಾರೆ.

 

ನಾಗ್‌ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ (Kalki 2898 AD) ಸಿನಿಮಾ, ಈಗಾಗಲೇ ಶೂಟಿಂಗ್‌ನಲ್ಲಿ ಬಿಜಿಯಾಗಿದೆ. ಈ ನಡುವೆ ಈಗ ಸೋಷಿಯಲ್‌ ಮೀಡಿಯಾದಲ್ಲಿ ಈ ಸಿನಿಮಾ  ಟ್ರೆಂಡಿಂಗ್‌ನಲ್ಲಿಯೂ ಮುಂದುವರಿದಿದೆ. ಅದಕ್ಕೆ ಕಾರಣ ರಿಲೀಸ್‌ ಆದ ಅಮಿತಾಭ್ ಬಚ್ಚನ್‌ ಅವರ ಹೊಸ ಲುಕ್‌.

Share This Article