ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ರಂಗು ರಂಗಿನ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಜನರೊಂದಿಗೆ ಸಚಿವ ಪ್ರಭು ಚವ್ಹಾಣ್ ಅವರು ನೃತ್ಯ ಮಾಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಔರಾದ್ ತಾಲೂಕಿನ ಬೋಂತಿ ತಾಂಡದಲ್ಲಿ ಹೋಳಿ ಹಬ್ಬವನ್ನು ಲಂಬಾಣಿ ಸಮುದಾಯದವರು ಬಹಳ ವಿಶೇಷವಾಗಿ ಆಚರಿಸಿದ್ದಾರೆ. ಅದರಲ್ಲಿಯೂ ಡಿಜೆ ಹಾಕಿಕೊಂಡು ನೃತ್ಯ ಮಾಡುತ್ತಿದ್ದ ಮಹಿಳೆಯರು ಮತ್ತು ಜನರೊಂದಿಗೆ ಪ್ರಭು ಚವ್ಹಾಣ್ ಅವರು ಕೂಡಾ ಬೊಬ್ಬೆ ಹೊಡೆದು, ಕುಣಿದು ಕುಪ್ಪಳಿಸಿದ್ದಾರೆ ಇದನ್ನೂ ಓದಿ: ಉಕ್ರೇನ್ ಮೇಲೆ ಯುದ್ಧ ಸಾರಿ ಕೈಸುಟ್ಟುಕೊಂಡ ರಷ್ಯಾ
ನಿಷೇಧಾಜ್ಞೆ ನಡುವೆ ಜಿಲ್ಲೆಯಾದ್ಯಂತ ಹೋಳಿ ಸಂಭ್ರಮದಲ್ಲಿ ಜನರು ಭಾಗಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಯಾಗದಂತೆ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್‍ಗೊಳಿಸಲಾಗಿದೆ. ಎರಡು ವರ್ಷದಿಂದ ಕೋವಿಡ್ ಕಾರಣಗಳಿಂದ ಹೋಳಿ ಹಬ್ಬ ಆಚರಣೆ ಮಾಡಿರಲಿಲ್ಲ. ಆದರೆ ಈ ಬಾರಿ ಕೋವಿಡ್ ಇಲ್ಲದ ಕಾರಣ ಹೋಳಿ ಹಬ್ಬವನ್ನು ಬಹಳ ಅದ್ದೂರಿಗೆ ಜನ ಆಚರಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿಗೆ ಬರಲಿದೆ ರಷ್ಯಾದ ಅಗ್ಗದ ಕಚ್ಚಾ ತೈಲ