ರಾಯಚೂರು: ನಗರದಲ್ಲಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ದಲಿತ ಸಂಘಟನೆಗಳ ಹೋರಾಟಗಾರರು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ, ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಪ್ರಭು ಚವ್ಹಾಣ್ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಸದಾಶಿವ ಆಯೋಗ ವರದಿ ಜಾರಿಗೆಗೆ ವಿರೋಧ ವ್ಯಕ್ತಪಡಿಸಿರುವ ಸಚಿವರ ಕ್ರಮ ಖಂಡಿಸಿ ಘೋಷಣೆ ಕೂಗಿದರು. ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಸದ್ಯ ಘೇರಾವ್ ಹಾಕಿದ ಮೂರು ಜನ ಹೋರಾಟಗಾರರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ನ್ಯಾಯಾಲಯಕ್ಕೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವ ಅಧಿಕಾರವಿದೆ: ಸುಪ್ರೀಂಕೋರ್ಟ್
Advertisement
Advertisement
ಇದಕ್ಕೂ ಮುನ್ನ ಪ್ರಭು ಚಲ್ಹಾಣ್ ರಾಯಚೂರು ತಾಲೂಕಿನ ಮಲಿಯಾಬಾದ್ ಗೋ ಶಾಲೆಗೆ ಭೇಟಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಡಿ 400 ಕೇಸ್ ದಾಖಲಾಗಿವೆ. 10 ಸಾವಿರ ಗೋಗಳ ರಕ್ಷಣೆ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಅನ್ನು ರಾಜಕೀಯವಾಗಿ 1 ಕಿ.ಮೀ, 1 ಮೀಟರ್ ದೂರ ಇಡಬೇಕು: ಪ್ರೀತಂಗೌಡ
Advertisement
ಗೋ ಸಂಜೀವಿನಿ ಯೋಜನೆ ಮುಖಾಂತರ ಆಂಬುಲೆನ್ಸ್ ನೀಡಿದ್ದೇವೆ. ಗೋವುಗಳ ಆರೋಗ್ಯದ ದೃಷ್ಟಿಯಿಂದ ಗೋ ಸಂಜೀವಿನಿ ಜಾರಿಗೆ ಮಾಡಿದ್ದೇವೆ. ರಾಜ್ಯದ ಎಲ್ಲಾ ತಾಲೂಕಿಗೂ ಒಂದು ಆಂಬುಲೆನ್ಸ್ ಬರುತ್ತದೆ ಎಂದು ಹೇಳಿದ್ದಾರೆ.