ಬೀದರ್: ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಿಂದ ಹಲವರು ಅಸಮಾಧಾನಗೊಂಡಿದ್ದಾರೆ. ವಿರೋಧದ ನಡುವೆಯೂ ಭಗವಂತ ಖೂಬಾಗೆ ಮತ್ತೆ ಬೀದರ್ ಟಿಕೆಟ್ (Bidar Ticket) ಸಿಕ್ಕಿದೆ. ಈ ಬೆನ್ನಲ್ಲೇ ಬಿಜೆಪಿ ಶಾಸಕ ಪ್ರಭು ಚೌಹಾಣ್ (Prabu Chauhan) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -
ಪ್ರಭು ಚೌಹಾಣ್ ಅವರು 3 ದಿನಗಳ ಹಿಂದೆ ಮುಂಬೈ ನಗರಕ್ಕೆ ತೆರಳಿದ್ದರು. ಗುರುವಾರ ಸಂಜೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಮುಂಬೈ ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಅವರಿಗೆ ಕಿರು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಯಶಸ್ವಿಯಾಗಿದೆ. ಪ್ರಸ್ತುತ ಚೌಹಾಣ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನೆರಡು ದಿನಗಳಲ್ಲಿ ಗುಣಮುಖರಾಗಿ ಹೊರಬರಲಿದ್ದಾರೆ ಎಂದು ಚೌಹಾಣ್ ಆಪ್ತವಲಯ ಮಾಹಿತಿ ನೀಡಿದೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
- Advertisement -
- Advertisement -
2022ರಲ್ಲೂ ಕೂಡಾ ಉಸಿರಾಟದ ಸಮಸ್ಯೆಯಿಂದ ಚೌಹಾಣ್ ಆಸ್ಪತ್ರೆ ಸೇರಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಗೆ ಬೀದರ್ ಕ್ಷೇತ್ರದಿಂದ ಭಗವಂತ್ ಖೂಬಾಗೆ ಟಿಕೆಟ್ ನೀಡಬೇಡಿ ಎಂದು ಪ್ರಭು ಚೌಹಾಣ್ ಪಟ್ಟು ಹಿಡಿದಿದ್ದರು. ಅಲ್ಲದೇ ವೇದಿಕೆಯಲ್ಲೇ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾಲಿಗೆ ಬಿದ್ದು ಬೇಡಿಕೊಂಡಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಮತ್ತೆ ಬೀದರ್ ಟಿಕೆಟ್ ಭಗವಂತ್ ಖೂಬಾಗೆ ನೀಡಿದೆ.