ಬೆಂಗಳೂರು: ನಿಯಮಿತವಾಗಿ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ಕ್ಯಾನ್ಸರ್‍ನಂತಹ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದಾಗಿದೆ. ಇದರಿಂದಾಗಿ ಪ್ರತಿಯೊಬ್ಬರು ಯೋಗ (Yoga) ಹಾಗೂ ವ್ಯಾಯಾಮವನ್ನು ರೂಢಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಕರೆಕೊಟ್ಟಿದ್ದಾರೆ.
ಭಾರತೀಯ ರೆಡ್ ಕ್ರಾಸ್ ಸೊಸೈಟಿ (Red Cross), ಕರ್ನಾಟಕ ರಾಜ್ಯ ಶಾಖೆ, ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿ ಸಹಯೋಗದಲ್ಲಿ ರಾಜಭವನದ ಸಿಬ್ಬಂದಿಗಾಗಿ ರಾಜಭವನದಲ್ಲಿ ಆಯೋಜಿಸಲಾಗಿದ್ದ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: Bengaluru Mysuru Expressway- ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧಿಸಿ: ಮರಿತಿಬ್ಬೇಗೌಡ
Advertisement
ಕ್ಯಾನ್ಸರ್ ದೇಹದಲ್ಲಿ ಸಂಭವಿಸುವ ಅಸಹಜ ಮತ್ತು ಅಪಾಯಕಾರಿ ಸ್ಥಿತಿಯಾಗಿದೆ. ದೇಹದಲ್ಲಿನ ಜೀವಕೋಶಗಳು ಅಸಹಜವಾಗಿ ಬೆಳೆಯಲು ಮತ್ತು ವಿಭಜಿಸಲು ಪ್ರಾರಂಭಿಸಿದಾಗ ಕ್ಯಾನ್ಸರ್ ಸಂಭವಿಸುತ್ತದೆ. ವಿವಿಧ ರೀತಿಯ ಕ್ಯಾನ್ಸರ್‍ನ ಲಕ್ಷಣಗಳು ಪರಸ್ಪರ ಭಿನ್ನವಾಗಿರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿಯೊಬ್ಬರೂ ಅದರ ಚಿಹ್ನೆಗಳು ಮತ್ತು ರೋಗಲಕ್ಷಣಗಳ ಬಗ್ಗೆ ತಿಳಿದಿರಬೇಕು, ಆದ್ದರಿಂದ ಸರಿಯಾದ ಸಮಯಕ್ಕೆ ರೋಗ ಲಕ್ಷಣಗಳನ್ನು ಗುರುತಿಸಿ ಮತ್ತು ರೋಗವನ್ನು ನಿರ್ಧರಿಸಿ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲು ಸಹಕಾರಿಯಾಗಲಿದೆ ಎಂದಿದ್ದಾರೆ.
Advertisement
Advertisement
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಕ್ಯಾನ್ಸರ್ ವಿಶ್ವಾದ್ಯಂತ ಸಾವಿಗೆ ಪ್ರಮುಖ ಕಾರಣವಾಗಿದೆ. ಕ್ಯಾನ್ಸರ್‍ನಿಂದ ಸಾವಿನ ಸಂಖ್ಯೆ ತುಂಬಾ ಹೆಚ್ಚಾಗಿದೆ. ಕ್ಯಾನ್ಸರ್ ರೋಗವನ್ನು ಲಘುವಾಗಿ ಪರಿಗಣಿಸಬಾರದು. ಮೊದಲ ಹಂತದಲ್ಲೇ ಚಿಕಿತ್ಸೆಯನ್ನು ಪಡೆಯಬೇಕು. ಅಲ್ಲದೇ ಸಾರ್ವಜನಿಕರು ಕೂಡ ತಮ್ಮ ಪ್ರತಿನಿತ್ಯ ಜೀವನದಲ್ಲಿ ಉತ್ತಮ ಆಹಾರ ಸೇವನೆ, ವ್ಯಾಯಾಮ, ಯೋಗಭ್ಯಾಸವನ್ನು ಅಳವಡಿಸಿಕೊಳ್ಳುವುದರಿಂದ ಖಾಯಿಲೆಗಳಿಂದ ದೂರವಿರಬಹುದಾಗಿದೆ ಎಂದಿದ್ದಾರೆ.
Advertisement
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯು ವಿಪತ್ತು ನಿರ್ವಹಣೆ, ಬ್ಲಡ್ ಬ್ಯಾಂಕ್, ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳು, ಪ್ರಥಮ ಚಿಕಿತ್ಸೆ, ಶಿಕ್ಷಣ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು, ವಿವಿಧ ತರಬೇತಿ ಮತ್ತು ಅಗತ್ಯವಿರುವಾಗ ಅಗತ್ಯವಿರುವವರಿಗೆ ಸೇವೆ ಸಲ್ಲಿಸುವ ಸ್ವಯಂಸೇವಾ ಮಾನವೀಯ ಸಂಸ್ಥೆಯಾಗಿದೆ. ಕರ್ನಾಟಕ ರೆಡ್ ಕ್ರಾಸ್ ಸಂಸ್ಥೆಯು 100 ವರ್ಷಗಳಿಗೂ ಹೆಚ್ಚು ಕಾಲದಿಂದ ಜನರ ಸೇವೆಯ ಅನೇಕ ಪುಣ್ಯ ಕಾರ್ಯಗಳನ್ನು ಮಾಡುತ್ತಿದೆ. ತುರ್ತು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ಅತ್ಯಂತ ದುರ್ಬಲ ಸಮುದಾಯವನ್ನು ಬೆಂಬಲಿಸುತ್ತಿರುವ ಸಂಸ್ಥೆಯ ಎಲ್ಲಾ ಸದಸ್ಯರು, ಸ್ವಯಂಸೇವಕರು ಮತ್ತು ಅಧಿಕಾರಿಗಳನ್ನು ಅವರು ಶ್ಲಾಘಿಸಿದರು.
ಕರ್ನಾಟಕ ರೆಡ್ ಕ್ರಾಸ್ ಸೊಸೈಟಿಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಈ ಮೂಲಕ ಕ್ಯಾನ್ಸರ್ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಕೆಲಸ ಮಾಡುತ್ತಿದೆ. ಕಿದ್ವಾಯಿ ಸ್ಮಾರಕ ಸಂಸ್ಥೆಯ ನಿರ್ದೇಶಕರು ಮತ್ತು ಅವರ ತಂಡವು ಮಾನವೀಯ ಸೇವೆ ಮತ್ತು ದೈವಿಕ ಸೇವೆ ಮಾಡುತ್ತಿದ್ದಾರೆ. ಮಾನವೀಯತೆಗೆ ಸೇವೆ ಸಲ್ಲಿಸುವ ಎರಡೂ ಸಂಸ್ಥೆಗಳ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದ ಅವರು, ರಾಜಭವನದ ಅಧಿಕಾರಿ, ಸಿಬ್ಬಂದಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಿದ್ವಾಯಿ ಸಂಸ್ಥೆಯ ನಿರ್ದೇಶಕರಾದ ಲೋಕೇಶ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ರೆಡ್ ಕ್ರಾಸ್ ಸೇರಿದಂತೆ ಅನೇಕ ಸ್ವಯಂ ಸಂಸ್ಥೆಗಳನ್ನು ನಮ್ಮೊಂದಿಗೆ ಕೈಜೋಡಿಸಿ, ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳುತ್ತಿವೆ. ವ್ಯಕ್ತಿಯನ್ನು ಸ್ಕ್ರೀನಿಂಗ್ ಮಾಡುವ ಮೂಲಕ ಪ್ರಾರಂಭಿಕ ಹಂತದಲ್ಲೇ ಕ್ಯಾನ್ಸರ್ ಪತ್ತೆ ಹಚ್ಚಿ ಚಿಕಿತ್ಸೆ ನೀಡಬಹುದಾಗಿದೆ. ಪ್ರತಿನಿತ್ಯ 1 ಗಂಟೆಗಳ ಕಾಲ ವ್ಯಾಯಾಮ, ಮಿಶ್ರ ಹಣ್ಣುಗಳ ಸೇವೆ ಮಾಡುವುದು ಹಾಗೂ ಜಂಕ್ ಫುಡ್ ಸೇವನೆ ಕಡಿತಗೊಳಿಸಿರುವುದರಿಂದ ಇದನ್ನು ನಿಯಂತ್ರಿಸಬಹುದಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯಾಧ್ಯಕ್ಷರಾದ ವಿಜಯ್ ಕುಮಾರ್ ಪಾಟೀಲ್ ಅವರು ಮಾತನಾಡಿ, ಮಾನವನಿಗೆ ಉತ್ತಮ ಆರೋಗ್ಯ ಬಹಳ ಪ್ರಮುಖವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಅನಾರೋಗ್ಯ ಹೆಚ್ಚಾಗಿ ಕಾಡುತ್ತಿದೆ. ಯುವಜನತೆ ಹೆಚ್ಚು ಅನಾರೋಗ್ಯ ತುತ್ತಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆರೋಗ್ಯದ ಮೌಲ್ಯವನ್ನು ಅರಿತು, ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು ಎಂದಿದ್ದಾರೆ.
ರೆಡ್ ಕ್ರಾಸ್ ರಾಜ್ಯ ಶಾಖೆಯ ಉಪಾಧ್ಯಕ್ಷರಾದ ಶ್ರೀ ಆನಂದ ಎಸ್.ಜಿಗಜಿನ್ನಿ, ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿ ನಿರ್ದೇಶಕ ಡಾ.ವಿ.ಲೋಕೇಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ – ಪರಿಷತ್‍ನಲ್ಲಿ ಕಾಂಗ್ರೆಸ್, ಬಿಜೆಪಿ ಜಟಾಪಟಿ
Web Stories