ಚಿಕ್ಕಬಳ್ಳಾಪುರ: ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹಾಗೂ ಚಿಕ್ಕಬಳ್ಳಾಪುರ (Chikkaballapura) ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ ಸುಧಾಕರ್ (K Sudhakar) ಇಬ್ಬರೂ ಒಂದೇ ದಿನ ಪ್ರತ್ಯೇಕವಾಗಿ ಜನರ ಸಮಸ್ಯೆಗಳನ್ನು ಆಲಿಸಲು `ಜನಸ್ಪಂದನ’ ಕಾರ್ಯಕ್ರಮ ಆಯೋಜಿಸುವ ಮೂಲಕ ಗಮನ ಸೆಳೆದಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ಎಂದಿನಂತೆ ಬೆಳಗ್ಗೆ ಚಿಕ್ಕಬಳ್ಳಾಪುರ ನಗರದ ಕಂದವಾರ ಬಾಗಿಲಿನಿಂದ ನಗರಸಭೆವರೆಗೂ ಮನೆ ಮನೆಗೆ ಭೇಟಿ ನೀಡಿ `ನಮಸ್ತೆ ಚಿಕ್ಕಬಳ್ಳಾಪುರ’ ಕಾರ್ಯಕ್ರಮ ನಡೆಸಿ ನಂತರ ತಾಲೂಕು ಕಚೇರಿ ಆವರಣದಲ್ಲಿ ಜನಸ್ಪಂದನ (Janaspandana) ಕಾರ್ಯಕ್ರಮ ನಡೆಸಿದರು. 250ಕ್ಕೂ ಹೆಚ್ಚು ಮಂದಿ ಸಾರ್ವಜನಿಕರು ಆಗಮಿಸಿ ತಮ್ಮ ಅಹವಾಲುಗಳನ್ನು ಶಾಸಕರಿಗೆ ಸಲ್ಲಿಕೆ ಮಾಡಿದ್ದು, ಸ್ಥಳದಲ್ಲೇ ಆಧಿಕಾರಿಗಳ ಜೊತೆ ಸಮಾಲೋಚನೆ ಮಾಡಿ ಕೆಲ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ನಡೆಸಿದರು. ಇದನ್ನೂ ಓದಿ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಜಾರಿ – ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ
Advertisement
Advertisement
ಇದೇ ದಿನ ಮತ್ತೊಂದೆಡೆ ಸಂಸದ ಡಾ.ಕೆ ಸುಧಾಕರ್ ಸಹ ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಿದರು. ಸಂಸದರಾದ ನಂತರ ಇದೇ ಮೊದಲ ಬಾರಿಗೆ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದರು. ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ- ಅಭ್ಯರ್ಥಿ ವಿಚಾರದಲ್ಲಿ ದೋಸ್ತಿಗಳ ಮಧ್ಯೆ ಭಿನ್ನಾಭಿಪ್ರಾಯ
Advertisement