– ಶಾಸಕರ ರೆಸಾರ್ಟ್ ಗಲಾಟೆ ಪಾರ್ಟಿ ಡ್ರಾಮಾ
ಹುಬ್ಬಳ್ಳಿ: ರಾಜ್ಯ ಸರ್ಕಾರ ರಜೆ ಹಾಗೂ ಶೋಕಾಚರಣೆ ಘೋಷಣೆ ಮಾಡಿದ್ದರೂ ಕಾರ್ಯಕ್ರಮ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ, ನೈತಿಕತೆ ಎನ್ನುವುದು ಕಾಂಗ್ರೆಸ್‍ನವರಿಗೆ ಗೊತ್ತೇ ಇಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎನ್ನೋದು ಅಪ್ರಸ್ತುತ. ಕೂಡಲೇ ಕಾಂಗ್ರೆಸ್ ಅಧ್ಯಕ್ಷರು ಈ ಘಟನೆ ಬಗ್ಗೆ ಕ್ಷಮೆ ಕೇಳಬೇಕು. ಅಲ್ಲದೇ ಸಿಎಂ, ಡಿಸಿಎಂ ಉತ್ತರ ಕೊಡಬೇಕು. ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದರೆಂದು ಸರ್ಕಾರಿ ರಜೆ ಘೋಷಿಸಿದ್ದರೂ ಕಾರ್ಯಕ್ರಮವನ್ನು ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ನೈತಿಕತೆ ಇಲ್ಲ. ದೇಶ ವಿರೋಧಿ ಹೇಳಿಕೆ ಕೊಟ್ಟ ಕನ್ನಯ್ಯ ಕುಮಾರ್‍ನನ್ನು ಕರೆದುಕೊಂಡು ಬಂದು ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ಕ್ಲಾಸ್!
Advertisement
Advertisement
ರೆಸಾರ್ಟಿನಲ್ಲಿ ಶಾಸಕರ ಗಲಾಟೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಇದು ಕಾಂಗ್ರೆಸ್ ಪಾರ್ಟಿಯ ಡ್ರಾಮಾ. ಎಲ್ಲರನ್ನ ಅಲ್ಲಿಗೆ ಕರೆದುಕೊಂಡು ಹೋಗಿದ್ದು ಏಕೆ? ಎಲ್ಲಾ ಡ್ರಾಮಾ ಮುಗಿದ ಮೇಲೆ ಕೇಸ್ ಹಾಕಿದ್ದಾರೆ. ಹೀಗಾಗಿ ಕೂಡಲೇ ಸೂಕ್ತ ತನಿಖೆ ನಡೆಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು. ಇದನ್ನೂ ಓದಿ: ಈಗಲ್ಟನ್ ರೆಸಾರ್ಟಿನಲ್ಲಿ ಸಣ್ಣ ಅಚಾತುರ್ಯವಾಗಿರೋದು ನಿಜ: ಸಿಎಂ ಎಚ್‍ಡಿಕೆ
Advertisement
Advertisement
ಈ ವಿಷಯವಾಗಿ ಹುಬ್ಬಳ್ಳಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯಿಸಿ, ರಕ್ಷಣೆ ಕೊಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಶಾಸಕರನ್ನ ರೆಸಾರ್ಟಿಗೆ ಕರೆದುಕೊಂಡು ಹೋಗಿದ್ದರು. ಆದರೆ ಅವರ ಶಾಸಕರಿಗೆ ರಕ್ಷಣೆ ನೀಡಲು ಆಗಿಲ್ಲ. ಜನರಿಗೆ ರಕ್ಷಣೆ ಎಲ್ಲಿಂದ ಕೊಡುತ್ತಾರೆ ಎಂದು ಟೀಕಿಸಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ ಸರ್ಕಾರಿ ರಜೆ ಘೋಷಣೆ ಮಾಡಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮ ಮಾಡಿದ್ದಾರೆ. ನೈತಿಕ ಹೊಣೆ ಹೊತ್ತು ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv