Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಕ್ಕೆ ಮದ್ದೂರು ಗಲಭೆ ತಡೆಯೋ ಯೋಗ್ಯತೆಯೇ ಇಲ್ಲ: ಜೋಶಿ ತೀವ್ರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸರ್ಕಾರಕ್ಕೆ ಮದ್ದೂರು ಗಲಭೆ ತಡೆಯೋ ಯೋಗ್ಯತೆಯೇ ಇಲ್ಲ: ಜೋಶಿ ತೀವ್ರ ಆಕ್ರೋಶ

Districts

ಸರ್ಕಾರಕ್ಕೆ ಮದ್ದೂರು ಗಲಭೆ ತಡೆಯೋ ಯೋಗ್ಯತೆಯೇ ಇಲ್ಲ: ಜೋಶಿ ತೀವ್ರ ಆಕ್ರೋಶ

Public TV
Last updated: September 8, 2025 6:24 pm
Public TV
Share
4 Min Read
Pralhad Joshi 2
SHARE

– ಪೊಲೀಸರ ಅನವಶ್ಯಕ ಲಾಠಿಚಾರ್ಜ್ ಮುಂದುವರೆದ್ರೆ ಹೋರಾಟದ ಎಚ್ಚರಿಕೆ

ನವದೆಹಲಿ: ಮಂಡ್ಯದ (Mandya) ಮದ್ದೂರಿನಲ್ಲಿ ಗಣೇಶ ಮೆರವಣಿಗೆಗೆ ಮಸೀದಿಯಿಂದ ಕಲ್ಲು ತೂರಾಟ ನಡೆಸಿರುವುದು ಅಕ್ಷಮ್ಯ ಅಪರಾಧ. ಈ ಗಲಭೆಯನ್ನು ತಡೆಯುವ ಯೋಗ್ಯತೆಯೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಕಿಡಿಕಾರಿದರು.

ದೆಹಲಿಯಲ್ಲಿ (Delhi) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಗಲಭೆ ಪ್ರಕರಣಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತಾಂಧ ಶಕ್ತಿಗಳಿಗೆ ಪ್ರೋತ್ಸಾಹ ಕೊಡುವ ರೀತಿ ನಡೆದುಕೊಂಡಿದ್ದರಿಂದಲೇ ಇಂಥ ಕೃತ್ಯಗಳು ಮರುಕಳಿಸಲು ಕಾರಣ ಎಂದು ಆರೋಪಿಸಿದರು. ಇದನ್ನೂ ಓದಿ: ಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

 ಮದ್ದೂರಿನಲ್ಲಿ (Maddur) ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಿಲ್ಲ. ಹಾಗಾಗಿಯೇ ಕಲ್ಲು ತೂರಾಟ ನಡೆದಿದೆ. ಇನ್ನು, ಸೋಮವಾರ ಬೆಳಗ್ಗೆ ಗಣೇಶ ವಿಸರ್ಜನೆಗೆ ಮುಂದಾದ ಅಮಾಯಕರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಇದೆಲ್ಲ ಸರ್ಕಾರದ ಹಿಂದೂ ವಿರೋಧಿ ಮಾನಸಿಕತೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಖಂಡಿಸಿದರು.

ಹಿಂದೂ ವಿರೋಧಿಗಳ ಮೇಲೆ ಕ್ರಮ ಕೈಗೊಳ್ಳುವ ಹಾಗೂ ಗಲಭೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಯೋಗ್ಯತೆ ಇಲ್ಲ. ಈ ಸರ್ಕಾರ ಅಮಾಯಕರ ಮೇಲೆ, ಗಣೇಶ ಭಕ್ತರ ಮೇಲೆ ಲಾಠಿ ಪ್ರಹಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮದ್ದೂರು ಗಲಭೆಕೋರರನ್ನು ಬಂಧಿಸಲಿ, ಸ್ವಯಂಪ್ರೇರಿತ ಬಂದ್‌ಗೆ ನಮ್ಮ ಬೆಂಬಲ: ಎನ್.ರವಿಕುಮಾರ್

ಪ್ರಕರಣ ಹಿಂಪಡೆದದ್ದೇ ಕಾರಣ
ಈ ಹಿಂದೆ ಪೊಲೀಸ್ ಠಾಣೆ ಸುಟ್ಟು, ಪೊಲೀಸರನ್ನೇ ಕೊಲ್ಲಲು ಪ್ರಯತ್ನಿಸಿದಂತಹ ಪ್ರಕರಣವನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ಕೋಮು ಗಲಭೆಯಲ್ಲಿ ಪಿಎಫ್‌ಐ ಲಿಂಕ್ ಇರುವ ಅನೇಕ ಪ್ರಕರಣಗಳನ್ನು ಹಿಂಪಡೆದಿದೆ. ಹೀಗಾಗಿ ಮತಾಂಧ ಕಿಡಿಗೇಡಿಗಳಿಗೆ ಪ್ರೋತ್ಸಾಹ ಸಿಕ್ಕಂತಾಗಿದೆ. ಕಾಂಗ್ರೆಸ್ ಸರ್ಕಾರ ಒಂದು ಸಮುದಾಯದ ಓಲೈಕೆಗಿಳಿದ ಪ್ರತಿಫಲವಾಗಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಹರಿಹಾಯ್ದರು.

 ಧಾರವಾಡದಲ್ಲೂ ಪೊಲೀಸ್ರು ಸುಖಾಸುಮ್ಮನೆ ಲಾಠಿ ಬೀಸಿದ್ರು
ಧಾರವಾಡದ ನರೇಂದ್ರ ಗ್ರಾಮದಲ್ಲಿ ಅತ್ಯಂತ ಶಾಂತವಾಗಿ ನಡೆಯುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಹೀಗೆ ಲಾಠಿ ಬೀಸಿದ್ದಾರೆ. ಕೇಳಿದರೆ ಎರಡೆರಡು ಗಣೇಶ ಮೆರವಣಿಗೆ ಏಕಕಾಲಕ್ಕೆ ಬರುತ್ತಿದ್ದವು ಎಂದಿದ್ದಾರೆ. ಇದ್ಯಾವ ನೀತಿ? ಎರಡೆರಡು ಮೆರವಣಿಗೆ ಬರಬಾರದೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸರ್ಕಾರದ ಓಲೈಕೆ ರಾಜಕಾರಣವೇ ಮದ್ದೂರು ಗಲಭೆಗೆ ಕಾರಣ: ಬಸವರಾಜ ಬೊಮ್ಮಾಯಿ ಕಿಡಿ

ನಮ್ಮದೇ ಸರ್ಕಾರವೆಂಬ ಭಾವನೆ
ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ನಾವೇನೇ ಮಾಡಿದರೂ ನಡೆಯುತ್ತದೆ ಎಂಬ ಭಾವನೆ ಒಂದು ವರ್ಗದಲ್ಲಿ ಮೂಡಿದೆ. ಹಾಗಾಗಿ ಕಿಡಿಗೇಡಿಗಳು ಇಂಥ ದುಸ್ಸಾಹಸಕ್ಕೆ ಕೈ ಹಾಕುತ್ತಿದ್ದಾರೆ. ಸರ್ಕಾರ ಮತಾಂಧ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ, ಪ್ರಕರಣ ಹಿಂಪಡೆಯುವುದು ಮತ್ತು ಅದಕ್ಕೆ ಪ್ರೋತ್ಸಾಹಕ ರೀತಿ ನಡೆದುಕೊಳ್ಳುತ್ತಿರುವುದೇ ಇದಕ್ಕೆಲ್ಲ ಕಾರಣ ಎಂದು ವಾಗ್ದಾಳಿ ನಡೆಸಿದರು.

 ಹಿಂದೂಗಳಿಗೆ, ಅಮಾಯಕರಿಗೆ, ಜನಸಾಮಾನ್ಯರಿಗೆ ಅನಗತ್ಯ ತೊಂದರೆ ಕೊಡುವುದು. ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಹಿಂದೂಗಳ ವಿರೋಧದ ನಡುವೆಯೂ ಬಾನು ಮುಷ್ತಾಕ್ ಅವರನ್ನೇ ಉದ್ಘಾಟನೆಗೆ ಕರೆದಿದ್ದು ಹಾಗೂ ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ನಡೆದುಕೊಂಡ ರೀತಿ ಇವೆಲ್ಲಾ ಮತಾಂಧ ಕ್ರಿಮಿನಲ್‌ಗಳಿಗೆ ಪ್ರೋತ್ಸಾಹ ಕೊಟ್ಟಂತಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಹಿಂದೂಗಳ ಮೇಲೆ ಲಾಠಿಚಾರ್ಜ್ ಯಾಕೆ? ಕಲ್ಲೆಸೆದವರ ಮೇಲೆ ಪೊಲೀಸರು ಪೌರುಷ ತೋರಿಸಲಿ – ಅಶ್ವಥ್ ನಾರಾಯಣ

ಮದ್ದೂರಿನಲ್ಲಿ ಹೋರಾಟದ ಎಚ್ಚರಿಕೆ
ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಪರಮಾವಧಿಯಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮದ್ದೂರಿನಲ್ಲಿ ಪೊಲೀಸರು ಅನಗತ್ಯವಾಗಿ ಗಣೇಶ ಭಕ್ತರಿಗೆ ತೊಂದರೆ ಕೊಡುವ ಕೆಲಸ ಮಾಡಿದರೆ, ಅಲ್ಲಿಯೇ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆ ಸಮುದಾಯದ ಮೇಲೇಕಿಲ್ಲ ನಿಮ್ಮ ದರ್ಪ
ರಾಜ್ಯ ಕಾಂಗ್ರೆಸ್ ಸರ್ಕಾರ ರೈತರು, ಹಿಂದೂಪರ ಹೋರಾಟಗಾರರು ಹಾಗೂ ಅಮಾಯಕ ಅಧಿಕಾರಿಗಳ ಮೇಲೆ ದರ್ಪ ತೋರುತ್ತದೆ. ಆದರೆ, ಗಣೇಶ ಹಬ್ಬ ಹಾಗೂ ಹಿಂದೂಗಳ ಹಬ್ಬದಾಚರಣೆ ವೇಳೆ ಕಾಲು ಕೆದರಿಕೊಂಡು ಬರುವ ಆ ಒಂದು ಸಮುದಾಯದ ಮೇಲೇಕೆ ದರ್ಪ ತೋರುವುದಿಲ್ಲ ಎಂದು ಪ್ರಶ್ನಿಸಿದರು.

 ಮತಾಂಧರ ಮೇಲೆ ನಯ-ನಾಜೂಕು
ಈ ಸರ್ಕಾರ ರೈತರು ಬೆಳೆಹಾನಿ ಪರಿಹಾರ ಕೇಳಿದರೆ, ನ್ಯಾಯಯುತ ಬಲೆ ಕೇಳಿದರೆ ರೈತರ ಮೇಲೆ ದರ್ಪ ಮೆರೆಯುತ್ತದೆ. ಅಧಿಕಾರಿಗಳನ್ನೂ ಅವಮಾನದಿಂದ ನಡೆಸಿಕೊಳ್ಳುತ್ತದೆ. ಆದರೆ, ಕೋಮು ಗಲಭೆಗಳಲ್ಲಿ ಕಲ್ಲು ತೂರುವ ಕಿಡಿಗೇಡಿಗಳ ಮೇಲೆ ಮಾತ್ರ ನಯ-ನಾಜೂಕುತನ ಪ್ರದರ್ಶಿಸುತ್ತದೆ ಎಂದು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಕ್ಕೆ ಬಾಲ ಬಿಚ್ಚಿದ್ದಾರೆ: ಪ್ರತಾಪ್ ಸಿಂಹ

ದೇಶದ ಬೆನ್ನೆಲುಬು ರೈತರು ಎಂದಿಗೂ ಪ್ರಚಾರ ಬಯಸುವುದಿಲ್ಲ. ಬಡ ರೈತರು ಶ್ರಮಪಟ್ಟು ಬೆಳೆದ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಮತ್ತು ನ್ಯಾಯಯುತ ಬೆಲೆ ಬಯಸುತ್ತಾರೆ. ಆದರೆ ರಾಜ್ಯ ಸರ್ಕಾರ ಪ್ರತಿ ಹಂತದಲ್ಲೂ ರೈತರನ್ನು ಅವಮಾನಿಸುತ್ತಿದೆ. ರೈತರ ಸಮಸ್ಯೆಗೆ ಸ್ಪಂದಿಸದೆ ಗರ್ವದಿಂದ ವರ್ತಿಸುತ್ತಿದೆ ಆರೋಪಿಸಿದರು.

 ಈ ಹಿಂದೆ ಸಂಕಷ್ಟ ತೋಡಿಕೊಂಡ ರೈತರನ್ನು ಕೋಪದಿಂದಲೇ ಎಚ್ಚರಿಸಿ ದುರಹಂಕಾರ ತೋರಿದ್ದರು ಡಿಸಿಎಂ ಡಿಕೆ ಶಿವಕುಮಾರ್. ಈಗ ಅದೇ ಕಾಂಗ್ರೆಸ್ಸಿನ ನಾಯಕರಾದ ಖರ್ಗೆ ಅವರು ರೈತರನ್ನು ಅವಮಾನಿಸಿದ್ದಾರೆ. ಇದೇ ಕಾಂಗ್ರೆಸ್ ಪಕ್ಷದ ನಿಜವಾದ ಮುಖ. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ರೈತರ ಘನತೆ, ಗೌರವಕ್ಕೆ ಬೆಲೆ ಕೊಡದೆ ರೈತ ಸಮುದಾಯವನ್ನು ತುಳಿಯುತ್ತಿದೆ ಎಂದು ದೂರಿದರು.

TAGGED:bjpcongressmaddurnewdelhiprahlad joshiStone peltingಕಲ್ಲು ತೂರಾಟಕಾಂಗ್ರೆಸ್ನವದೆಹಲಿಪ್ರಹ್ಲಾದ್ ಜೋಶಿಬಿಜೆಪಿಮದ್ದೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
15 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
37 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
41 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
1 hour ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
1 hour ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?