ಹುಬ್ಬಳ್ಳಿ: ಚುನಾವಣೆ ಬಂದಾಗ ಕಾಂಗ್ರೆಸ್ ನಾಯಕರು ಬರೀ ರೈಲು ಬಿಡುತ್ತಾರೆ. ಈ ಹಿಂದೆ 72 ಲಕ್ಷ ರೂ. ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಕೊಡಲಿಲ್ಲ, ಈಗ ಚಂದ್ರನನ್ನು ತಂದುಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಅದೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು.
Advertisement
ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಪ್ರಣಾಳಿಕೆಯಲ್ಲಿ ಅವಳಿನಗರದ ಮಧ್ಯೆ ಮೆಟ್ರೋ ರೈಲು ಯೋಜನೆ ಜಾರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದು ಕಾಂಗ್ರೆಸ್ ನಾಯಕರು ಜನರಿಗೆ ಬಿಡುತ್ತಿರುವ ರೈಲು ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಜಾತಿ, ಭಾಷೆಯ ವಿಷಬೀಜ ಬಿತ್ತಿ ಅಧಿಕಾರ ಹಿಡಿಯುವ ತಂತ್ರ ಪ್ರಾರಂಭವಾಗಿದೆ: ಈರಣ್ಣ ಕಡಾಡಿ
Advertisement
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭ್ರಷ್ಟಾಚಾರ ಮಾಡಿದಕ್ಕೆ ಅವರನ್ನು ಕೆಳಗೆ ಇಳಿಸಿದರಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಆದರೆ ಭ್ರಷ್ಟಾಚಾರ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಡಿ.ಕೆ.ಶಿವಕುಮಾರ್ ಮಾತನಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗಿದೆ ಎಂದು ಜೋಶಿ ತಿರುಗೇಟು ನೀಡಿದರು.
Advertisement
Advertisement
ನೈರುತ್ಯ ರೈಲ್ವೆ ವಲಯ ಕಚೇರಿಯ ಹೋರಾಟದಿಂದ ಇಲ್ಲಿಯವರೆಗಿನ ಅಭಿವೃದ್ಧಿಗೆ ಬಿಜೆಪಿ ಕಾರಣವಾಗಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹುಬ್ಬಳ್ಳಿ-ಧಾರವಾಡಕ್ಕೆ ಸಾಕಷ್ಟು ಯೋಜನೆಗಳು ಬಂದಿವೆ. ಮುಂದೆ ತಾರಿಹಾಳ ಗ್ರಾಮದ ಬಳಿ 150 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರೀಡಾ ಗ್ರಾಮ ನಿರ್ಮಾಣ ಮಾಡಲಾಗುತ್ತಿದೆ. ಧಾರವಾಡದಲ್ಲೂ ಕ್ರೀಡಾ ಸಮುಚ್ಚಯ ನಿರ್ಮಾಣ ಮಾಡಲಾಗುವುದು. ರೈಲ್ವೆ ಯೋಜನೆಗಳನ್ನು ಸಹ ತುರ್ತಾಗಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿ ಪ್ರಣಾಳಿಕೆ ಬಿಡುಗಡೆ ವೇಳೆ ಮಾಜಿ ಸಚಿವ ಜಗದೀಶ್ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ್, ಅಮೃತ್ ದೇಸಾಯಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.