ಬೆಂಗಳೂರು: ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ, ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ಮೂಲಕ ತಿಳಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟೀಕಿಸಿದರು.
`ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆಯ ಸಂದರ್ಭದ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ (Dr.B R Ambedkar) ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ, ಅಂಬೇಡ್ಕರರ ಜನ್ಮದಿನವೂ ಬರುತ್ತಿರುವ ಸಲುವಾಗಿ 100 ವರ್ಷದ ನೆನಪನ್ನು ಭೀಮ ಹೆಜ್ಜೆ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು. ಇದನ್ನೂ ಓದಿ: ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್
ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು. ಅವರು ಸಂವಿಧಾನ ರಚನಾ ಸಭೆಯಲ್ಲಿ ಇರಬಾರದೆಂಬ ಕಾರಣಕ್ಕೆ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ (Pakistana) ಬಿಟ್ಟು ಕೊಟ್ಟ ಸಂಗತಿಯನ್ನು, ಎರಡೆರಡು ಬಾರಿ ಅವರನ್ನು ಸೋಲಿಸಿದ್ದು, ಮಧ್ಯಂತರ ಸರ್ಕಾರ ಬಾರದಂತೆ ತಡೆದುದ್ದನ್ನು ತಿಳಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಕಳ್ಳರು ದಲಿತರನ್ನು ತುಳಿದಿದ್ದಾರೆಯೇ ಹೊರತು ಉದ್ಧಾರ ಮಾಡಿಲ್ಲ: ಅಶೋಕ್
ದಲಿತರ ಮೀಸಲಾತಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ವಿರೋಧಿಸಿದ್ದನ್ನು ಜನರ ಮುಂದೆ ತೆರೆದಿಡುತ್ತೇವೆ. ಈಗಲೂ ಖರ್ಗೆಯವರಿಗೆ ಅವಮಾನ ಮಾಡಿದ್ದನ್ನೂ ತಿಳಿಸುತ್ತೇವೆ ಎಂದರು. ಇದನ್ನೂ ಓದಿ: ವಾರಣಾಸಿ ಗ್ಯಾಂಗ್ ರೇಪ್ – ಏರ್‌ಪೋರ್ಟಲ್ಲೇ ಪೊಲೀಸರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ
ಬೆಳಗಾವಿ (Belagavi) ಅಧಿವೇಶನದಲ್ಲಿ ನಮ್ಮ ಶಾಸಕಿ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬಂದು 100 ವರ್ಷವಾಗುತ್ತಿದೆ ಎಂದು ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳಗಾವಿಗೆ ಮಹಾತ್ಮ ಗಾಂಧಿಯವರು ಬಂದ ಕಾರ್ಯಕ್ರಮವನ್ನು ಅವರು ಮಾಡಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಿಹಾರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ- ಗುರುವಾರ ಒಂದೇ ದಿನ 58 ಬಲಿ
ಅಂಬೇಡ್ಕರ್ ಅವರ ಭೇಟಿಯ 100 ವರ್ಷ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು. ಸರ್ಕಾರ ಈ ಕಾರ್ಯಕ್ರಮ ಮಾಡಿದ್ದರೆ ನಾವು ಮಾಡುತ್ತಿರಲಿಲ್ಲ. ಇದು ನಮ್ಮ ಬದ್ಧತೆ ಎಂದು ಹೇಳಿದರು.