ಹುಬ್ಬಳ್ಳಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕರೆ ನೀಡಿದ್ದಾರೆ.
ನಾಳೆಯಿಂದ ಆರಂಭವಾಗಲಿರುವ ಹರ್ ಘರ್ ತಿರಂಗಾ ಅಭಿಯಾನದ ಮುನ್ನಾ ದಿನವೇ ರಾಜ್ಯದಲ್ಲಿ ಹರ್ ಘರ್ ತಿರಂಗಾ ಹವಾ ಆರಂಭವಾಗಿದೆ. ಮನೆ ಮನೆಗಳಲ್ಲೂ ತ್ರಿವರ್ಣ ಧ್ವಜ ಹಾರಾಡಬೇಕು. ಈ ನಿಟ್ಟಿನಲ್ಲಿ ಅಭಿಯಾನದ ಮುನ್ನಾ ದಿನವೇ ಪ್ರಹ್ಲಾದ್ ಜೋಶಿ ತಿರಂಗಾ ನಡೆ ಯಾತ್ರೆಗೆ ಚಾಲನೆ ನೀಡಿದರು. ಇದನ್ನೂ ಓದಿ: ಆ.28ಕ್ಕೆ ನೋಯ್ಡಾದ ಸೂಪರ್‌ಟೆಕ್‌ನ ಅವಳಿ ಟವರ್ ನೆಲಸಮ – ಅವಧಿ ವಿಸ್ತರಿಸಿದ ಸುಪ್ರೀಂ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಇಂದು ತಿರಂಗಾ ನಡೆ ಆಯೋಜಿಸಲಾಗಿತ್ತು. ತಿರಂಗಾ ನಡೆ ಯಾತ್ರೆಯನ್ನು ಪ್ರಹ್ಲಾದ್ ಜೋಶಿ ಉದ್ಘಾಟಿಸುವ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಾಥ್ ನೀಡಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ವಿಶೇಷವಾಗಿ ಪ್ರಹ್ಲಾದ್ ಜೋಶಿಯವರು ಈ ಯಾತ್ರೆಯಲ್ಲಿ ಡೋಲು ಹಾಗೂ ವೀರಗಾಸೆ ವಾದ್ಯಗಳನ್ನು ಬಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನಕ್ಕೆ ಜನರಲ್ಲಿ ಹುರುಪು ತುಂಬಿದರು.
ದೇಶಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ಪ್ರತಿ ಮನೆಯ ಮೇಲೆ ನಮ್ಮ ರಾಷ್ಟ್ರಧ್ವಜವನ್ನು ಹಾರಿಸಿ ದೇಶದೊಂದಿಗೆ ನಮ್ಮ ರಾಷ್ಟ್ರ ಭಕ್ತಿಯನ್ನು ವ್ಯಕ್ತಪಡಿಸಬೇಕು. ಈ ಅಭಿಯಾನವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಪ್ರಹ್ಲಾದ್ ಜೋಶಿ ರಾಜ್ಯದ ಜನರಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಈಗ ಚುನಾವಣೆ ನಡೆದರೆ ಎನ್‌ಡಿಎಗೆ 286, ಕರ್ನಾಟಕದಲ್ಲಿ ಬಿಜೆಪಿಗೆ 13 ಸ್ಥಾನ