ನವದೆಹಲಿ: ಪಿಎಫ್‍ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
Advertisement
ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿಂದೆ ಪಿಎಫ್‍ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಬೊಮ್ಮಾಯಿ ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೀವು ಊರಿಗೆ ಹಿರಿಯರು, ಕೋಳಿ ಅಂಗಡಿ ಉದ್ಘಾಟನೆಗೆ ತಂದೆಯನ್ನು ಆಹ್ವಾನಿಸಿದ್ದರು: ಪ್ರವೀಣ್ ಬಗ್ಗೆ ಆರೀಫ್ ಮಾತು
Advertisement
PFI’s activities should be monitored at the national level. The Chief Minister of Karnataka told me that he is deliberating over the matter with the Home Minister.
— Pralhad Joshi (@JoshiPralhad) July 28, 2022
Advertisement
ಪಿಎಫ್‍ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂಥಹ ಸಂಘಟನೆಗಳನ್ನು ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬಸವರಾಜ್ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.
Advertisement
ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪ್ರಹ್ಲಾದ್ ಜೋಶಿ ಅವರು ಪಿಎಫ್‍ಐ, ಎಸ್‍ಡಿಪಿಐ ಸಂಘಟನೆಯವರು ಇಂಥಹ ಕೃತ್ಯದ ಹಿಂದಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದರು. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂಥಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್
ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಸವರಾಜ್ ಬೊಮ್ಮಾಯಿ ಅವರು, ಪ್ರಹ್ಲಾದ್ ಜೋಶಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಪಿಎಫ್‍ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚೆ ನಡೆಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.