– ಸರ್ಕಾರ ಸ್ಪಷ್ಟ ಮಾರ್ಗಸೂಚಿ ತರಲಿ; ಕೇಂದ್ರ ಸಚಿವ ಆಗ್ರಹ
ಹುಬ್ಬಳ್ಳಿ: ಸಿಇಟಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಜನಿವಾರ ತೆಗೆಸಿರುವುದು ಜನರ ನಂಬಿಕೆ ಮೇಲೆ ಪ್ರಹಾರ ನಡೆಸಿದಂತೆ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Prahlad Joshi) ಖಂಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದೊಂದಿಗೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಹೋಂಗಾರ್ಡ್ನನ್ನು ಅಮಾನತ್ತು ಮಾಡಿ ಕೈ ತೊಳೆದುಕೊಂಡಿದ್ದು, ಇದು ಸರಿಯಲ್ಲ. ಕೇವಲ ಬ್ರಾಹ್ಮಣರಷ್ಟೇ ಜನಿವಾರ ಹಾಕುವುದಿಲ್ಲ. ಇದೊಂದು ಧಾರ್ಮಿಕ ನಂಬಿಕೆಯಾಗಿದ್ದು, ಇದರ ಮೇಲೆ ಪ್ರಹಾರ ನಡೆಸಿದೆ. ಇದನ್ನ ಗಂಭೀರವಾಗಿ ಪರಿಗಣಿಸಿ ಸರ್ಕಾರ ಇದಕ್ಕೊಂದು ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಮರಾಠಿ ಜನರ ಹಿತಾಸಕ್ತಿಗಾಗಿ ಭಿನ್ನಾಭಿಪ್ರಾಯ ಬದಿಗಿಡಲು ಸಿದ್ಧ – ಮೈತ್ರಿ ಸುಳಿವು ನೀಡಿದ ಉದ್ಧವ್, ರಾಜ್ ಠಾಕ್ರೆ ಸಹೋದರರು
ವಿವಾದ ಮರೆಮಾಚಲು ಯತ್ನ:
ರಾಜ್ಯದಲ್ಲಿ ಶುರುವಾದ ಜಾತಿಗಣತಿ ವಿವಾದ, ಆಡಳಿತ ವೈಫಲ್ಯ ಮರೆಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ಏನಾದರೊಂದು ವಿಷಯಾಂತರ ಮಾಡುತ್ತಲೇ ಇರುತ್ತದೆ ಎಂದು ಟೀಕಿಸಿದರು. ಇದನ್ನೂ ಓದಿ: ಇಬ್ರು ಹುಡ್ಗೀರು ನನ್ನ ಮಗಳ ಜೀವನ ಸರಿ ಮಾಡಿದ್ದಾರೆ: ವೈಷ್ಣವಿ ಗೌಡ ತಾಯಿ
`ರೋಹಿತ್ ವೇಮುಲಾ ಕಾಯ್ದೆ ಜಾರಿ’ ಕುರಿತು ಪ್ರತಿಕ್ರಿಯಿಸಿ ಕಾಂಗ್ರೆಸ್ ವಿವಾದ ಮೈಮೇಲೆ ಎಳೆದುಕೊಂಡಾಗ ಹೀಗೆ ಜನರ ಗಮನ ಬೇರೆಡೆ ಸೆಳೆಯುವುದು ಹೊಸದೇನಲ್ಲ ಎಂದು ಹೇಳಿದರು.
ಯಾರ ಮನೆಗೆ ಭೇಟಿ ನೀಡಿದ್ದಾರೆ?
ಜಾತಿಗಣತಿ ಎಂದು ಯಾರ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿದ್ದಾರೆ?. ವಿವಾದ, ವಿರೋಧ ವ್ಯಕ್ತವಾಗುತ್ತಲೇ `ಇದು ಜಾತಿ ಗಣತಿಯಲ್ಲ ಆರ್ಥಿಕ ಸಮೀಕ್ಷೆ’ ಎಂದರು. ಇದೆಂಥಾ ಹುಡುಗಾಟ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಸಿದ್ದರಾಮಯ್ಯ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್ ಟಾರ್ಗೆಟ್: ಪ್ರತಾಪ್ ಸಿಂಹ
ನೈಜ ಕಾಳಜಿಯಿಲ್ಲ:
ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ (Congress) ನಾಯಕರಿಗೆ ದೇಶದ ಬಗ್ಗೆ ನೈಜ ಕಾಳಜಿಯಿಲ್ಲ. ರಾಷ್ಟ್ರದ ಸಮಗ್ರತೆ, ನಾಗರಿಕರ ಕ್ಷೇಮ ಯಾವುದರ ಬಗ್ಗೆಯೂ ಒಂದು ಪ್ರಾಮಾಣಿಕ ಮತ್ತು ಪಾರದರ್ಶಕ ನಿಲುವುಗಳಿಲ್ಲ. ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಾರಷ್ಟೇ ಎಂದು ಆರೋಪಿಸಿದರು. ಇದನ್ನೂ ಓದಿ: ಸಾಮಾನ್ಯ ಸಿಬ್ಬಂದಿ ಈ ರೀತಿ ಮಾಡಲು ಸಾಧ್ಯವೇ?: ಜನಿವಾರ ವಿವಾದಕ್ಕೆ ಸರ್ಕಾರದ ವಿರುದ್ಧ ಕೋಟ ಕಿಡಿ
24/7 ವೋಟ್ ಬ್ಯಾಂಕ್ ರಾಜಕಾರಣ:
ರಾಹುಲ್ ಗಾಂಧಿ ದೇಶದೊಳಿತಿಗೆ ರಾಜಕೀಯ ಮಾಡುತ್ತಿಲ್ಲ. 24/7 ವೋಟ್ ಬ್ಯಾಂಕ್ ರಾಜಕೀಯದ ಮೇಲೆ ಮಾತ್ರ ಗಮನಹರಿಸಿದ್ದಾರೆ. ರಾಜ್ಯದಲ್ಲಿ `ರೋಹಿತ್ ವೇಮುಲಾ ಕಾಯ್ದೆ’ ಜಾರಿಗೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದೂ ಇದರ ಒಂದು ಭಾಗ ಎಂದು ಟೀಕಿಸಿದರು.