ಇಂದು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ `ಮಾಫಿಯಾ’ ಚಿತ್ರತಂಡ (Mafia Movie ) ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ತಮ್ಮ ಚಿತ್ರದ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ಸಂದರ್ಭದಲ್ಲಿ ತೆರೆಗೆ ಬರಲಿದೆ.
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶಿಸಿರುವ ಈ ಚಿತ್ರದ ನಾಯಕನಾಗಿ ಪ್ರಜ್ವಲ್ ದೇವರಾಜ್ ಹಾಗೂ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ದೇವರಾಜ್ ಅವರು ಸಹ ʻಮಾಫಿಯಾʼ ಚಿತ್ರದಲ್ಲಿ ಅಭಿನಯಿಸಿದ್ದು, ತಂದೆ – ಮಗ ಇಬ್ಬರು ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್
ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿರುವ ʻಮಾಫಿಯಾʼ ಚಿತ್ರದಲ್ಲಿ ಮೈನವಿರೇಳಿಸುವ ಆಕ್ಷನ್ ಸನ್ನಿವೇಶಗಳಿದೆ. ಚಿತ್ರ ಬಿಡುಗಡೆಗಾಗಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಭಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣ ʻಮಾಫಿಯಾʼ ಚಿತ್ರಕ್ಕಿದೆ. ಇದನ್ನೂ ಓದಿ: ಜಾನಿ ಮಾಸ್ಟರ್ ಜೊತೆಗಿನ ಫೋಟೋ: ಟೀಕೆಗೆ ಒಳಗಾದ ನಯನತಾರಾ-ವಿಘ್ನೇಶ್