ಈಗಾಗಲೇ ಧಾರಾವಾಹಿ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟಿದ್ದ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಪ್ರಜ್ವಲ್ ಮೊದಲ ಬಾರಿಗೆ ಮಹಿಳಾ ಪ್ರಧಾನ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಹಿಂದೆ ಲಾ ಸಿನಿಮಾದಲ್ಲಿ ನಟಿಸಿದ್ದು, ಇವರು ಈ ಬಾರಿ ಅವರು ಕಾದಂಬರಿ ಆಧಾರಿತ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರದ್ದು ಶ್ಯಾನುಭೋಗರ ಮಗಳ ಪಾತ್ರವಂತೆ.
Advertisement
ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ ಸಿನಿಮಾ ಇದಾಗಿದ್ದು, ಸ್ವತಂತ್ರ ಪೂರ್ವದ ಕಥೆಯನ್ನು ಇದು ಒಳಗೊಂಡಿದೆ. ಇಡೀ ಸಿನಿಮಾ ಶ್ಯಾನುಭೋಗರ ಮಗಳ ಸುತ್ತಲೇ ಸುತ್ತುವುದು ಕಥೆಯ ವಿಶೇಷ. ಸ್ವತಂತ್ರ ಪೂರ್ವದಲ್ಲಿ ಶ್ಯಾನಭೋಗರ ಮನೆತನಗಳನ್ನೂ ಈ ಸಿನಿಮಾ ಪ್ರತಿನಿಧಿಸಲಿದೆಯಂತೆ. ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡಗೆ ಉರಿಸಲು ಜಯಶ್ರೀ ಕೆನ್ನೆಗೆ ಮುತ್ತಿಟ್ಟ ನಟ ರಾಕೇಶ್ ಅಡಿಗ
Advertisement
Advertisement
ಕನ್ನಡದಲ್ಲಿ ಅತೀ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ ಒಬ್ಬರಾದ ಕೋಡ್ಲು ರಾಮಕೃಷ್ಣ ಈ ಚಿತ್ರದ ನಿರ್ದೇಶಕರು. ಬಿ.ಎ.ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಈ ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಹಾಗೂ ವಸಂತ್ ರಾವ್ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ.
Advertisement
“ಶ್ಯಾನುಭೋಗರ ಮಗಳು” ಚಿತ್ರದ ಪ್ರಮುಖಪಾತ್ರದಲ್ಲಿ ರಾಗಿಣಿ ಪ್ರಜ್ವಲ್ ಅಭಿನಯಿಸುತ್ತಿದ್ದಾರೆ. ಮೇಘಶ್ರೀ, ನಿರಂಜನ್ ಕುಮಾರ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ, ಶಂಕರ್ ಅಶ್ವತ್ಥ್ , ನೀನಾಸಂ ಅಶ್ವತ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಚಿತ್ರದಲ್ಲಿ ಟಿಪ್ಪಸುಲ್ತಾನ್ ಪ್ರಮುಖ ಪಾತ್ರವಾಗಿದ್ದು, ಆ ಪಾತ್ರಕ್ಕಾಗಿ ಆಯ್ಕೆ ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್ ಕೊನೆಯ ವಾರದಿಂದ ಮೈಸೂರು, ಶ್ರೀರಂಗಪಟ್ಟಣ, ಮೇಲುಕೋಟೆ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.