ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ಶುಕ್ರವಾರ) ನಡೆಯಲಿದೆ.
ಲೈಂಗಿಕ ದೌರ್ಜನ್ಯ, ಅತ್ಯಾಚಾರ ಸೇರಿ ಎಫ್‌ಐಆರ್ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ವಕೀಲರಾದ ಅರುಣ್ ಮೂಲಕ ಮೇ 29ರಂದು ಜನಪ್ರತಿನಿಧಿಗಳ ಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮೇ 31ರಂದು ಅರ್ಜಿಯ ವಿಚಾರಣೆ ನಡೆಯಲಿದೆ.
Advertisement
Advertisement
ಭವಾನಿ ರೇವಣ್ಣ ಬೇಲ್ ಭವಿಷ್ಯವೂ ಇಂದೇ:
ಅಲ್ಲದೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪತ್ನಿ ಭವಾನಿ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ತೀರ್ಪು ಕೂಡ ಶುಕ್ರವಾರವೇ ಹೊರಬೀಳಲಿದೆ. ಇದರಿಂದಾಗಿ ಶುಕ್ರವಾರವು ಎಚ್.ಡಿ.ರೇವಣ್ಣ ಕುಟುಂಬಕ್ಕೆ ಬಿಗ್ ಡೇ ಆಗಿದೆ. ಇದನ್ನೂ ಓದಿ: ಕೊನೆಗೂ ಪ್ರಜ್ವಲ್ ರೇವಣ್ಣ ಬಂಧನ: ಎಸ್‌ಐಟಿ ಮುಂದಿನ ತನಿಖೆ ಪ್ರಕ್ರಿಯೆ ಏನು?
Advertisement
Advertisement
ಮೆಡಿಕಲ್ ಟೆಸ್ಟ್ ಬಳಿಕ ಕೋರ್ಟ್ ಮುಂದೆ ಹಾಜರ್:
ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ವಾಸ್ತವ್ಯ ಹೂಡಿರುವ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯನ್ನು ಬೆಳಗ್ಗೆ 8 ಗಂಟೆಯಿಂದ ಎಸ್‌ಐಟಿ ಅಧಿಕಾರಿಗಳು ಆರಂಭಿಸಲಿದ್ದಾರೆ. ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್‌ಗೆ ಒಳಪಡಿಸಲಿದ್ದಾರೆ. ಈಗಾಗಲೇ ಬೌರಿಂಗ್ ಆಸ್ಪತ್ರೆ ಬಳಿಯೂ ಬ್ಯಾರಿಕೇಡ್‌ಗಳನ್ನ ಅಳವಡಿಸಿದ್ದು, ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮೆಡಿಕಲ್ ಟೆಸ್ಟ್ ಮುಗಿದ ಬಳಿಕ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!
ವಿದೇಶಕ್ಕೆ ತೆರಳಿದ್ದ ಪ್ರಜ್ವಲ್ ರೇವಣ್ಣರನ್ನ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ತಡರಾತ್ರಿ ಬಂಧಿಸಲಾಗಿದೆ. ದೇವನಹಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಆಗಮಿಸುತ್ತಲೇ ಇಮಿಗ್ರೇಷನ್ ಅಧಿಕಾರಿಗಳು ವಿಚಾರಣೆ ನಡೆಸಿ, ಸಂಸದರನ್ನು ಎಸ್‌ಐಟಿ ಅಧಿಕಾರಿಗಳಿಗೆ ವಹಿಸಿದ್ದಾರೆ. ಬಳಿಕ ಎಸ್‌ಐಟಿ ಕಚೇರಿಗೆ ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು ರಾತ್ರಿ ತಂದೆ ಹೆಚ್.ಡಿ ರೇವಣ್ಣ ಅವರಿಗೆ ನೀಡಿದ್ದ ಕೊಠಡಿಯಲ್ಲೇ ಪ್ರಜ್ವಲ್ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದರು. ಎಸ್‌ಐಟಿ ಅಧಿಕಾರಿಗಳು, ರೇವಣ್ಣ ಅವರಿಗೆ ನೀಡಿದ್ದ ಹಾಸಿಗೆಯನ್ನೇ ವಿತರಣೆ ಮಾಡಿದ್ದರು. ಕಚೇರಿ ಸುತ್ತಲೂ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಅರೆಸ್ಟ್ ಬಳಿಕ SIT ಕಚೇರಿಗೆ ಪ್ರಜ್ವಲ್ ರೇವಣ್ಣ; ಏರ್‌ಪೋರ್ಟ್‌ನಲ್ಲಿ ಏನೆಲ್ಲಾ ಬೆಳವಣಿಗೆ ಆಯ್ತು? – ಮುಂದೇನು ಕ್ರಮ?