ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಸಹಜ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಎಂಎಲ್‌ಸಿ ಸೂರಜ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಸಿಐಡಿ ಸೈಬರ್ ಕ್ರೈಮ್ ಠಾಣೆ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬAಧಿಸಿದAತೆ ಸೂರಜ್ ರೇವಣ್ಣ ಜಾಮೀನು ಆದೇಶವನ್ನು ಕೋರ್ಟ್ ಇಂದು ಪ್ರಕಟಿಸಲಿದೆ. ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಸೈನಿಕರಿಗೆ ಅಪಮಾನ ಮಾಡಿದ್ದಾರೆ: ಹೆಚ್‌ಡಿಕೆ
Advertisement
Advertisement
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಲಾಗಿತ್ತು. ಇಂದು ಎರಡು ಅರ್ಜಿಗಳ ಸಂಬಧ ಕೋರ್ಟ್ ಆದೇಶ ಪ್ರಕಟಿಸಲಿದೆ.
Advertisement
Advertisement
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ಇವರ ಜೊತೆಗೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಹೋದರ ಸೂರಜ್ ರೇವಣ್ಣ ಕೂಡ ಜೈಲಲ್ಲಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ