ಏರ್‌ಪೋರ್ಟ್‌ನಲ್ಲಿ ಮಹಿಳಾ ಅಧಿಕಾರಿಗಳಿಂದ ಪ್ರಜ್ವಲ್‌ ಅರೆಸ್ಟ್‌ – ಯಾಕೆ?

Public TV
1 Min Read
prajwal revanna arrests

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು 35 ದಿನಗಳ ಬಳಿಕ ಬಂಧಿಸಲಾಗಿದೆ. ವಿದೇಶದಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸುತ್ತಿದ್ದಂತೆ ಪ್ರಜ್ವಲ್‌ರನ್ನು ಮಹಿಳಾ ಅಧಿಕಾರಿಗಳು ಬಂಧಿಸಿದ್ದಾರೆ.

ಏರ್‌ಪೋರ್ಟ್‌ನಲ್ಲಿ ಗುರುವಾರ ಮಧ್ಯರಾತ್ರಿ 12:40 ರ ಸುಮಾರಿಗೆ ಪ್ರಜ್ವಲ್‌ ಬಂಧನವಾಯಿತು. ಮೂವರು ಮಹಿಳಾ ಅಧಿಕಾರಿಗಳ ಮೂಲಕ ಆರೋಪಿಯನ್ನು ಎಸ್‌ಐಟಿ ಬಂಧಿಸಿದೆ. ಅದು ಯಾಕೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ. ಇದನ್ನೂ ಓದಿ: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿ ಕುರಿತು ಜೂ.2ರ ಬಳಿಕ ಕ್ರಮ: ಕೇಂದ್ರ

Prajwal Revanna Arrest 2

ಜೀಪ್‌ ಚಾಲಕ ಹೊರತು ಪಡಿಸಿದರೆ ಉಳಿದವರೆಲ್ಲಾ ಮಹಿಳಾ ಅಧಿಕಾರಿಗಳು, ಸಂಸದನ ಬಂಧನ ಸಂದರ್ಭದಲ್ಲಿದ್ದರು. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಮುಜುಗರ ಉಂಟುಮಾಡುವ ನಿಟ್ಟಿನಲ್ಲಿ ಬಂಧನವಾಗಿದೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೇ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಬೇಕು. ನಾವಿದ್ದೇವೆ ಧೈರ್ಯವಾಗಿ ಬಂದು ದೂರು ನೀಡುವಂತೆ ಸಂದೇಶ ರವಾನಿಸಬೇಕು. ಹೀಗಾಗಿ ಮಹಿಳಾ ಅಧಿಕಾರಿಗಳಿಂದ ಎಸ್‌ಐಟಿ ಬಂಧನ ಮಾಡಿಸಿದೆ. ಇದನ್ನೂ ಓದಿ: ಇಂದು ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ – ರೇವಣ್ಣ ಕುಟುಂಬಕ್ಕಿಂದು ಬಿಗ್‌ ಡೇ; ಏಕೆ ಗೊತ್ತೇ?

Share This Article