ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಕಡ್ಡಾಯ ಜಾಮೀನು ತಿರಸ್ಕರಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ರದ್ದುಪಡಿಸಿ, ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ.
ಗಡುವಿನೊಳಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಹೀಗಾಗಿ, ಈ ಪ್ರಕರಣದಲ್ಲಿ ಪ್ರಜ್ವಲ್ ಕಡ್ಡಾಯ ಜಾಮೀನು ಕೋರಬಹುದು. ಆದರೆ, ಬೇರೊಂದು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದೆ. ಆದ್ದರಿಂದ ಕಡ್ಡಾಯ ಜಾಮೀನಿನ ಅನುಕೂಲ ಪ್ರಜ್ವರ್ ರೇವಣ್ಣಗೆ ಸಿಗುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
