ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಸಂತ್ರಸ್ತೆಯರಿಗಾಗಿ ಎಸ್‌ಐಟಿ ಸಹಾಯವಾಣಿ ಆರಂಭಿಸಿದೆ.
ಸಂತ್ರಸ್ತೆಯರು ಮತ್ತು ಬಾತ್ಮೀದಾರರ ನೆರವಿಗಾಗಿ ಹೆಲ್ಪ್ಲೈನ್ ನಂಬರ್ 6360938947 ತೆರೆದಿರುವುದಾಗಿ ಎಸ್‌ಐಟಿ (SIT) ಅಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ 4 ದಿನ ಎಸ್‌ಐಟಿ ಕಸ್ಟಡಿಗೆ
ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಕುರಿತು ಈಗಾಗಲೇ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ತನಿಖಾ ಕಾಲದಲ್ಲಿ ಈ ಘಟನೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರಿರುವುದು ಗೊತ್ತಾಗಿದೆ ಎಂದು ಎಸ್‌ಐಟಿ ತಿಳಿಸಿದೆ.
ಯಾರೇ ಸಂತ್ರಸ್ತರು ಅಥವಾ ಬಾತ್ಮೀದಾರರಿಗೆ ಕಾನೂನಿನ ನೆರವು, ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾದಲ್ಲಿ ಹೆಲ್ಪ್ಲೈನ್‌ಗೆ ಕರೆ ಮಾಡಬಹುದು. ಸಂತ್ರಸ್ತರ ಅಥವಾ ಬಾತ್ಮೀದಾರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ಇದೊಂದು ರಾಜಕೀಯ ಷಡ್ಯಂತ್ರ: ಬಂಧನ ಬಳಿಕ ಹೆಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ