ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಹೈಕೋರ್ಟ್ (High Court) ತಾತ್ಕಾಲಿಕ ರಿಲೀಫ್ ನೀಡಿದೆ.
ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ.
ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ದಿನಾಂಕ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ. ಇದನ್ನೂ ಓದಿ: ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ
ಮುಂದಿನ ಆದೇಶದವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.