ನವದೆಹಲಿ: ಪ್ರಜ್ವಲ್ ರೇವಣ್ಣ (Prajwal Revanna) ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic Passport) ಹಿಂಪಡೆಯಲು ನ್ಯಾಯಾಲಯದಿಂದ (Court) ಯಾವುದೇ ಆದೇಶ ಬಂದಿಲ್ಲ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯ ವಕ್ತಾರ ರಣ್‌ಧೀರ್ ಜೈಸ್ವಾಲ್, ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಪ್ರಯಾಣಿಸಿದ್ದಾರೆ. ರಾಜತಾಂತ್ರಿಕ ಪಾಸ್‌ಪೋರ್ಟ್ ಹಿಂಪಡೆಯಲು ಕೋರ್ಟ್‌ನಿಂದ ಆದೇಶ ಪ್ರಕಟವಾಗಬೇಕು. ಇಲ್ಲಿಯವರೆಗೆ ಕೋರ್ಟ್ ಆದೇಶ ಬಂದಿಲ್ಲ ಎಂದು ತಿಳಿಸಿದ್ದಾರೆ.
Advertisement
ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಜರ್ಮನಿಗೆ (Germany) ತೆರಳಿದ್ದಾರೆ. ಹೀಗಾಗಿ ಕೂಡಲೇ ಈ ಪಾಸ್‌ಪೋರ್ಟ್ ಹಿಂಪಡೆಯಬೇಕೆಂಬ ಆಗ್ರಹ ಕೇಳಿ ಬಂದಿದೆ. ಇದನ್ನೂ ಓದಿ: ಜರ್ಮನಿಯಿಂದ ದುಬೈಗೆ ಬಂದಿಳಿದ ಪ್ರಜ್ವಲ್ ರೇವಣ್ಣ
Advertisement
Advertisement
ರಾಜತಾಂತ್ರಿಕ ಪಾಸ್‌ಪೋರ್ಟ್ ಎಂದರೇನು?
ಭಾರತದಲ್ಲಿ (India) ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರಾಜತಾಂತ್ರಿಕ ಶೀರ್ಷಿಕೆಯನ್ನು ಹೊಂದಿರುವ ಮತ್ತು ತಮ್ಮ ಅಧಿಕೃತ ಕರ್ತವ್ಯಗಳನ್ನು ಪೂರೈಸಲು ಇತರ ದೇಶಗಳಿಗೆ ಭೇಟಿ ನೀಡುವ ನಿರ್ದಿಷ್ಟ ವ್ಯಕ್ತಿಗಳಿಗೆ ಮಾತ್ರ ನೀಡಲಾಗುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ಗಳಿಗಿಂತ ವಿಭಿನ್ನವಾಗಿ ಕಾಣುವ ಟೈಪ್ ಡಿ ಪಾಸ್‌ಪೋರ್ಟ್ ಇದಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ನ ಕವರ್ ಸಾಮಾನ್ಯ ಕಡು ನೀಲಿ ಬಣ್ಣಕ್ಕೆ ಬದಲಾಗಿ ಮರೂನ್ ಕವರ್ ಹೊಂದಿರುತ್ತದೆ. ಇದನ್ನೂ ಓದಿ: ಪ್ರಜ್ವಲ್ ಮೊಬೈಲ್‍ನಿಂದ ವೀಡಿಯೋ ಲೀಕ್ ಆಗಿದ್ದೇ ರೋಚಕ!
Advertisement
ರಾಜತಾಂತ್ರಿಕ ಪಾಸ್‌ಪೋರ್ಟ್ 28 ಪುಟಗಳನ್ನು ಹೊಂದಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ಗಿಂತ ಭಿನ್ನವಾಗಿ ಮತ್ತು ವಯಸ್ಕರಿಗೆ 10 ವರ್ಷಗಳವರೆಗೆ ಮತ್ತು ಅಪ್ರಾಪ್ತರಿಗೆ ಐದು ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಐದು ವರ್ಷ ಅಥವಾ ಅದಕ್ಕಿಂತ ಕಡಿಮೆ ಅವಧಿಗೂ ನೀಡಲಾಗುತ್ತದೆ.