ಬೆಂಗಳೂರು: ಕಾಂಗ್ರೆಸ್ ಸರ್ಕಾರ ಫೋನ್ ಟ್ಯಾಪ್ (Phone Tapping) ಮಾಡಲ್ಲ. ಮಾಡಲು ಅವರೇನು ಭಯೋತ್ಪಾದಕರೇ(Terrorist). ಅವರು ರಾಜಕೀಯ ನಾಯಕರು. ಅವರ ಫೋನ್ ಟ್ಯಾಪ್ (Phone Tapping) ಯಾಕೆ ಮಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದ್ದಾರೆ.
ನನ್ನ ಮತ್ತು ರೇವಣ್ಣನ (HD Revanna) ಫೋನ್ ಟ್ಯಾಪ್ ಮಾಡಲಾಗುತ್ತಿದೆ ಎಂಬ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಭಯೋತ್ಪಾದಕರ ಫೋನನ್ನು ಅನುಮತಿ ಪಡೆದು ಟ್ಯಾಪ್ ಮಾಡಲಾಗುತ್ತದೆ. ಇವರು ನಮ್ಮ ರಾಜ್ಯದ ನಾಯಕರು, ಇವರ ಫೋನ್ ಟ್ಯಾಪ್ ಮಾಡುವ ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ. ಕೇವಲ ಪ್ರಚಾರಕ್ಕಾಗಿ ಇಂತಹ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಜ್ವಲ್ ತಪ್ಪು ಮಾಡದೇ ಇದ್ದರೆ ಜೆಡಿಎಸ್‌ನಿಂದ ಅಮಾನತು ಮಾಡಿದ್ದು ಯಾಕೆ : ಸಿಎಂ ಪ್ರಶ್ನೆ
ಯಾರಿಗೂ ನಾನು ಏನೂ ಕೊಟ್ಟಿಲ್ಲ. ನಾನು ರಾಜಕಾರಣಿ ನನ್ನ ಭೇಟಿ ಮಾಡಲು ಬಿಜೆಪಿಯವರು ಸೇರಿ ನೂರಾರು ಜನ ಬರುತ್ತಾರೆ. ಬರುವ ಮೊದಲು ಸಮಯ ಕೇಳುತ್ತಾರೆ. ದೇವರಾಜೇಗೌಡ ಬಿಜೆಪಿಯವರೇ. ಅವರು ನನ್ನನ್ನು ಭೇಟಿ ಮಾಡಬೇಕು ಎಂದು ಕೇಳಿದ್ದರು. ಆದರೆ ನಾನು ಸಮಯ ಕೊಟ್ಟಿಲ್ಲ. ಅರ್ಧ ನಿಮಿಷವೂ ನಾನು ಮಾತನಾಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ಇಲ್ಲ, ಕೊಲೆಗಡುಕ ರಾಜ್ಯ ಮಾಡಿದ್ದೇ ಸರ್ಕಾರದ ಸಾಧನೆ : ವಿಜಯೇಂದ್ರ ವಾಗ್ದಾಳಿ
ಪೆನ್ ಡ್ರೈವ್‌ಗೂ ಸಂಬಂಧವಿಲ್ಲ:
ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ಅವರ ಪಾತ್ರದ ಬಗ್ಗೆ ಆರೋಪ ಮಾಡಿರುವ ಕುರಿತು ಕೇಳಿದಾಗ, ನನಗೂ ಈ ಪ್ರಕರಣಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ನನ್ನ ಹೆಸರನ್ನು ಪ್ರಸ್ತಾಪ ಮಾಡದಿದ್ದರೆ ಅವರಿಗೆಲ್ಲ ನಿದ್ದೆ ಬರುವುದಿಲ್ಲ. ಮಾಧ್ಯಮಗಳು ಸಹ ಈ ವಿಚಾರದಲ್ಲಿ ನೈತಿಕತೆಯ ಗಡಿ ಮೀರಬಾರದು. ಉಪ್ಪು ತಿಂದವನು ನೀರು ಕುಡಿಯಬೇಕು ಎಂದು ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.
ಯಾರ ಜೊತೆಯೂ ಮಾತನಾಡಿಲ್ಲ
ಡಿ.ಕೆ.ಶಿವಕುಮಾರ್, ದೇವರಾಜೇಗೌಡ ಮತ್ತು ಶಿವರಾಮೇಗೌಡ ಅವರ ನಡುವಿನ ಸಂಭಾಷಣೆ ಆಡಿಯೋ ಬಿಡುಗಡೆ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಯಾರ ಜೊತೆಯೂ ಮಾತನಾಡಬಾರದ್ದು ಮಾತನಾಡಿಲ್ಲ. ಯಾರಿಗೂ ನಾನು ಜಿಪಿಎ ಕೊಟ್ಟಿಲ್ಲ. ನಾನೊಬ್ಬ ರಾಜಕಾರಣಿ, ನನ್ನನ್ನು ಭೇಟಿ ಮಾಡಲು ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷದ ಕಾರ್ಯಕರ್ತರೂ ಬರುತ್ತಾರೆ. ಅವರು ಬಿಜೆಪಿಯವರು, ನನ್ನ ಭೇಟಿಗೆ ಸಮಯ ಕೇಳಿದ್ದರು. ನಾನು ಕೊಡಲಿಲ್ಲ. ಅರ್ಧ ನಿಮಿಷವೂ ನಾನು ಯಾರ ಬಳಿಯೂ ಮಾತನಾಡಿಲ್ಲ. ನನಗೂ ರಾಜಕೀಯ, ವ್ಯವಹಾರ ಪ್ರಜ್ಞೆ ಇದೆ. ಈ ವಿಚಾರದ ಗಂಭೀರತೆಯೂ ನನಗೆ ಅರ್ಥವಾಗುತ್ತದೆ ಎಂದು ತಿಳಿಸಿದರು.
ಡಿ.ಕೆ.ಶಿವಕುಮಾರ್ ಜೈಲಿಗೆ ಹೋದಾಗ ನಾನು ಅವರ ತಾಯಿಯನ್ನು ಸಾಂತ್ವನ ಮಾಡಿದ್ದೆ, ಆದರೆ ಅವರು ನನ್ನ ತಂದೆಗೆ ನೋವು ನೀಡುವುದು ಸರಿಯೇ ಎಂದು ಕುಮಾರಸ್ವಾಮಿ ಹೇಳಿಕೆಗೆ, ನನಗೆ ಅವರ ಪರಿಸ್ಥಿತಿ ಬಗ್ಗೆ ಅನುಕಂಪವಿದೆ. ನಾನು ಈ ವಿಚಾರದಲ್ಲಿ ಯಾರ ಬಗ್ಗೆಯೂ ಅಂದೂ ಮಾತನಾಡಿಲ್ಲ, ಇಂದೂ ಮಾತನಾಡುವುದಿಲ್ಲ ಎಂದರು.