ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡಿ – ಪ್ರಜ್ವಲ್‌ ರೇವಣ್ಣ ಮನವಿ

Public TV
1 Min Read
PRAJWAL REVANNA 1
ಬೆಂಗಳೂರು: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್‌ ರೇವಣ್ಣ (Prajwal Revanna) ವಿಶೇಷ ತನಿಖಾ ತಂಡಕ್ಕೆ (SIT) ಮನವಿ ಮಾಡಿದ್ದಾರೆ.
ಪ್ರಜ್ವಲ್‌ ರೇವಣ್ಣ ಪರ ವಕೀಲ ಅರುಣ್‌ ಜಿ ಅವರು  ಎಸ್‌ಐಟಿ ಮುಖ್ಯಸ್ಥರಿಗೆ  ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ತಿಳಿಸಿದ್ದಾರೆ.

ವಕೀಲರ ಪತ್ರದಲ್ಲಿ ಏನಿದೆ?
ನನ್ನ ಕಕ್ಷಿದಾರರಾದ ಪ್ರಜ್ವಲ್ ರವರ ಮನೆಯ ಮೇಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದೀರಿ. ಆದರೆ ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಲಾಗಿದೆ.
ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ನೀಡಿ ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ  ಕಕ್ಷಿದಾರರ ಪರವಾಗಿ ಕೋರುತ್ತೇನೆ.

Share This Article