ಬೆಂಗಳೂರು: ವಿದೇಶ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಮೃತಪಟ್ಟಿದ್ದ ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ವಿಚಾರ ಎಂಟು ವರ್ಷದ ಬಳಿಕ ಮತ್ತೆ ಚರ್ಚೆಗೆ ಬಂದಿದೆ
ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಪರೋಕ್ಷವಾಗಿ ಸಿದ್ದರಾಮಯ್ಯ ಪುತ್ರನ ವಿಚಾರ ಕೆದಕಿದ್ದಾರೆ. ಇದನ್ನೂ ಓದಿ: ದೇವರಾಜೇಗೌಡಗೆ ಬಿಟ್ರೆ ʼಕೈʼ ಮುಖಂಡರಿಗೆ ನಾನು ವೀಡಿಯೋ ಕೊಟ್ಟಿಲ್ಲ: ಪ್ರಜ್ವಲ್ ಮಾಜಿ ಡ್ರೈವರ್
- Advertisement
ಅಂದು ಸಿದ್ದರಾಮಯ್ಯ (Siddaramaiah) ಕುಟುಂಬದ ಮಾನ ಉಳಿಸಿದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಂದಿನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ (Sushma Swaraj). ಆದರೆ ಈಗ ಪ್ರಜ್ವಲ್ ಪ್ರಕರಣದಲ್ಲಿ ಮೋದಿ ಹೆಸರನ್ನು ಉಲ್ಲೇಖ ಮಾಡುತ್ತಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ ಕಾಂಗ್ರೆಸ್ ಪತನ; ಮೊದಲ ಕಾಂಗ್ರೆಸ್ಸೇತರ ಸರ್ಕಾರ ತಂದ ಚುನಾವಣೆಯಲ್ಲಿ ಏನಾಯ್ತು?
- Advertisement
ಈ ವಿಚಾರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಕುಮಾರಸ್ವಾಮಿ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ಕುಮಾರಸ್ವಾಮಿ ಆರೋಪ ಸುಳ್ಳು, ನಾನು ಮೋದಿ ಜೊತೆಗೆ ಮಾತನಾಡಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿಯ ಹಿರಿಯ ಪುತ್ರ ರಾಕೇಶ್ 2016ರ ಜುಲೈನಲ್ಲಿ ಬೆಲ್ಜಿಯಂ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಬೆಲ್ಜಿಯಂನ ಬ್ರಸೆಲ್ಸ್ ಯೂನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ನಂತರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಿ ವಿಮಾನದ ಮೂಲಕ ರಾಕೇಶ್ ಸಿದ್ದರಾಮಯ್ಯ ಅವರ ಮೃತದೇಹವನ್ನು ಕರ್ನಾಟಕಕ್ಕೆ ತರಲಾಗಿತ್ತು.