ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಹಿಳಾ ಆಯೋಗದ ಬಳಿಕ ಈಗ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (karnataka State Child Rights Protection Commission) ಎಂಟ್ರಿ ಕೊಟ್ಟಿದೆ.
ಈ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿಜಯ್ ಕುಮಾರ್ ಸಿಂಗ್‌ಗೆ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರಾಯ್‌ಬರೇಲಿಯಿಂದ ಸ್ಪರ್ಧಿಸಲ್ಲ ಪ್ರಿಯಾಂಕಾ – ಇನ್ನೂ ಅಭ್ಯರ್ಥಿ ಘೋಷಣೆ ಮಾಡದ ಕಾಂಗ್ರೆಸ್
- Advertisement
ಸಂತ್ರಸ್ತೆ ಒಬ್ಬರು ತನ್ನ ಮಗಳ ಜೊತೆ ಕೂಡ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದಾರೆ. ಪ್ರಕರಣದಲ್ಲಿ ಆರೋಪಿ ಅಪ್ರಾಪ್ತ ಹೆಣ್ಣು ಮಕ್ಕಳನ್ನ ಬಳಸಿಕೊಂಡಿರುವ ಬಗ್ಗೆ ಮೇಲ್ನೋಟಕ್ಕೆ ಅನುಮಾನ ಇದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯಿಂದ ಅಪ್ರಾಪ್ತ ಹೆಣ್ಣು ಮಕ್ಕಳ ಬಳಕೆ ಪತ್ತೆಯಾದಲ್ಲಿ ಈ ಬಗ್ಗೆ ವರದಿ ನೀಡುವಂತೆ ಎಸ್‌ಐಟಿಗೆ ಪತ್ರ ಬರೆದಿದ್ದಾರೆ.
- Advertisement
ಒಂದು ವೇಳೆ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ ಆಯೋಗ ಪೋಕ್ಸೋ (POCSO Case) ಪ್ರಕರಣದಡಿ ದೂರು ದಾಖಲಿಸಲು ತಯಾರಿ ನಡೆಸಿದೆ.