ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ ಸಿಆರ್ಪಿಸಿ (Code of Criminal Procedure) ಸೆಕ್ಷನ್ 164ರ ಅಡಿ ಸಂತ್ರಸ್ತ ಮಹಿಳೆ ಹೇಳಿಕೆ ನೀಡಿದ್ದಾರೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಸಂಬಂಧ CrPC ಸೆಕ್ಷನ್ 164ರ (Section 164) ಅಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರ (Judge) ಮುಂದೆ ಸಂತ್ರಸ್ತೆ ತನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ಹೇಳಿಕೆ ದಾಖಲು ಮಾಡಿದ ನಂತರ ಎಸ್‌ಐಟಿ ಸಂತ್ರಸ್ತೆಯನ್ನು ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ತಂಪೆರೆದ ವರುಣ – ನಗರದ ಹಲವೆಡೆ ಮಳೆ
Advertisement
Advertisement
ಏನಿದು ಸಿಆರ್ಪಿಸಿ ಸೆಕ್ಷನ್ 164?
ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರು ಮೊದಲು ಸಂತ್ರಸ್ತರ ಹೇಳಿಕೆ ಪಡೆದು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸುತ್ತಾರೆ. ನಂತರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸಂತ್ರಸ್ತರು ಜಡ್ಜ್ ಮುಂದೆ ಹಾಜರಾಗಿ ತಮ್ಮ ಹೇಳಿಕೆ ನೀಡುತ್ತಾರೆ. ಪೊಲೀಸರ ಮುಂದೆ ಆರೋಪಿಗಳ ವಿರುದ್ಧ ಹೇಳಿಕೆ ನೀಡಿದರೂ ಕೆಲವೊಮ್ಮೆ ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಆರೋಪಿಗಳ ಕಡೆಯಿದ ಬೆದರಿಕೆ ಅಥವಾ ಇನ್ಯಾವುದೋ ಒತ್ತಡಕ್ಕೆ ಮಣಿದು ಉಲ್ಟಾ ಹೇಳಿಕೆ ನೀಡುತ್ತಾರೆ. ಜಡ್ಜ್ ಮುಂದೆ ಉಲ್ಟಾ ಹೇಳಿಕೆ ನೀಡಿದರೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿ ಆರೋಪಿ ಶಿಕ್ಷೆಯಿಂದ ಪಾರಾಗುವ ಸಾಧ್ಯತೆ ಇರುತ್ತದೆ. ಆದರೆ ಸಿಆರ್ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ದಾಖಲಾದರೆ ಅದನ್ನು ನ್ಯಾಯಾಲಯಗಳು ಗಂಭೀರವಾಗಿ ಪರಿಗಣಿಸುತ್ತವೆ. ಈ ಹೇಳಿಕೆಗಳನ್ನು ಬದಲಿಸುವುದಾಗಲೀ, ಹಿಂಪಡೆಯಲು ಸಾಧ್ಯವಿಲ್ಲ. ಈ ಕಾರಣಕ್ಕೆ ಸಂತ್ರಸ್ತರ ಹೇಳಿಕೆ ಭಾರೀ ಮಹತ್ವ ಪಡೆಯುತ್ತದೆ. ದೂರುದಾರರು ಏನು ಹೇಳಿಕೆ ಕೊಟ್ಟಿದ್ದಾರೆ ಎನ್ನುವುದನ್ನು ಗೌಪ್ಯವಾಗಿ ಇಡಲಾಗುತ್ತದೆ. ಸೆಕ್ಷನ್ 164ರ ಅಡಿ ಹೇಳಿಕೆ ನೀಡಿದ ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾದ ಉದಾಹರಣೆಯಿದೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
Advertisement
Advertisement
ಈ ಪ್ರಕ್ರಿಯೆ ಹೇಗೆ ನಡೆಯುತ್ತೆ?
ತನಿಖಾಧಿಕಾರಿಗಳು ಸಂತ್ರಸ್ತರನ್ನು ಜಡ್ಜ್ ಮುಂದೆ ಮೊದಲು ಹಾಜರು ಪಡಿಸುತ್ತಾರೆ. ಸಂತ್ರಸ್ತರಾದವರು ಯಾವುದೇ ಪ್ರಲೋಭನೆ, ಒತ್ತಡ, ಬೆದರಿಕೆಗೆ ಬಗ್ಗದೇ ಹೇಳಿಕೆ ನೀಡುತ್ತೇನೆ ಎಂದು ಪ್ರಮಾಣ ಮಾಡಬೇಕಾಗುತ್ತದೆ. ಈ ರೀತಿ ಹೇಳಿಕೆ ನೀಡುವಾಗ ಕೊಠಡಿಯಲ್ಲಿ ಜಡ್ಜ್, ಸ್ಟೆನೊಗ್ರಾಫರ್ ಬಿಟ್ಟು ಬೇರೆ ಯಾರೂ ಇರುವುದಿಲ್ಲ. ಸಂತ್ರಸ್ತರಾದವರು ಸ್ವ ಇಚ್ಛೆಯಿಂದ ಹೇಳಿಕೆ ನೀಡುತ್ತಾರೆ ಎನ್ನುವುದು ಜಡ್ಜ್‌ಗೆ ಮನವರಿಕೆಯಾದ ನಂತರ ಮುಂದಿನ ಪ್ರಕ್ರಿಯೆಗಳು ಆರಂಭವಾಗುತ್ತದೆ.