ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ- ಮೋದಿಗೆ ಪ್ರಿಯಾಂಕಾ ಪ್ರಶ್ನೆ

Public TV
1 Min Read
Priyanka Gandhi

ನವದೆಹಲಿ: ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ಪ್ರಜ್ವಲ್‌ ರೇವಣ್ಣ ಕುರಿತು ಮೋದಿ ಮೌನವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪ್ರಜ್ವಲ್ ಪೆನ್‍ಡ್ರೈವ್ ಕೇಸ್- ಕುಟುಂಬದ ಹೆಸರು ಯಾಕೆ ತರ್ತೀರಾ ಅಂತಾ ಹೆಚ್‍ಡಿಕೆ ಕಿಡಿ

ಎಕ್ಸ್‌ನಲ್ಲೇನಿದೆ..?: ಪ್ರಧಾನಿ ಅವರು ಭುಜದ ಮೇಲೆ ಕೈಯಿಟ್ಟು ಫೋಟೋ ತೆಗೆಸಿಕೊಳ್ಳುವ ನಾಯಕ ಹಾಗೂ ಚುನಾವಣೆಗೂ 10 ದಿನಗಳ ಹಿಂದೆ ಸ್ವತಃ ಪ್ರಧಾನಿಯೇ ಆ ನಾಯಕನ ಪರ ಪ್ರಚಾರಕ್ಕೆ ತೆರಳಿದ್ದರು. ಅಲ್ಲದೇ ಪ್ರಧಾನಿಯವರು ನಾಯಕನನ್ನು ವೇದಿಕೆಯಲ್ಲಿ ಹಾಡಿ ಹೊಗಳಿದ್ದರು. ಆದರೆ ಇಂದು ಆ ಕರ್ನಾಟಕದ ನಾಯಕ ದೇಶದಿಂದಲೇ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧದ ಆರೋಪಗಳನ್ನು ಕೇಳಿದಾಗ ನಿಜಕ್ಕೂ ಮೈ ನಡುಗುತ್ತದೆ. ಆತ ನೂರಾರು ಮಹಿಳೆಯರ ಜೀವನವನ್ನೇ ಹಾಳು ಮಾಡಿದ್ದಾನೆ. ಇಷ್ಟಲ್ಲಾ ಆದರೂ ಮೋದಿಜಿ, ನೀವು ಇನ್ನೂ ಸುಮ್ಮನಿರುತ್ತೀರಾ ಎಂದು ಕಿಡಿಕಾರಿದ್ದಾರೆ.

ಸಂಸದ ಪ್ರಜ್ವಲ್‌ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದೆ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿದೆ. ಇತ್ತ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಸರ್ಕಾರ ಆದೇಶಿಸಿದೆ.

Share This Article