ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣಕ್ಕೆ (Prajwal Revanna Pendrive case) ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ (H.D Kumaraswamy) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್‍ಡ್ರೈವ್ ಕೇಸ್ ಹಿಂದೆ ಮಹಾನಾಯಕ ಇದ್ದಾರೆ. ಆ ಮಹಾ ನಾಯಕನನ್ನು ಭೇಟಿ ಮಾಡಿದ್ಯಾರು? ಈ ಪ್ರಕರಣದ ವಿರುದ್ಧ ಕಾಂಗ್ರೆಸ್ ಮಹಾನಾಯಕರು ಪ್ರತಿಭಟನೆ ಮಾಡಿಸಿದ್ರು, ಇದನ್ನು ಇಷ್ಟಕ್ಕೆ ಬಿಡುವುದಿಲ್ಲ ಎಂದು ಅವರು ಕೆಂಡಾಮಂಡಲರಾಗಿದ್ದಾರೆ.
Advertisement
Advertisement
ನಾವು ಯಾರನ್ನೂ ರಕ್ಷಿಸುವ ಕೆಲಸ ಮಾಡುವುದಿಲ್ಲ. ಈ ವಿಚಾರವಾಗಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ಮಾತನ್ನು ಚಿಕ್ಕಪ್ಪನಾಗಿ ಹೇಳುತ್ತಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ಹೇಳುತ್ತಿದ್ದೇನೆ. ಇದು ನಾಚಿಕೆಗೇಡಿನ ವಿಷಯ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಅವರು ಕಿಡಿಕಾರಿದ್ದಾರೆ.
Advertisement
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ, ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್ ನೇತೃತ್ವದಲ್ಲಿ, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಸಂಬಂಧ ಎಸ್‍ಐಟಿ ತನಿಖೆ ನಡೆಸುತ್ತಿದೆ.