ಹಾಸನ: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಎ1 ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರು ಸದ್ಯ ಸಂಕಷ್ಟದಿಂದ ಪಾರಾಗಲು ದೇವರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ತಮ್ಮ ಮನೆಯಲ್ಲಿ ಅಗ್ನಿಕುಂಡ ನಿರ್ಮಿಸಿ ಮನೆದೇವರಿಗೆ ವಿಶೇಷ ಪೂಜೆ (Speical Pooja) ಸಲ್ಲಿಸಿದ್ದಾರೆ.
ಬೆಳ್ಳಂಬೆಳಗ್ಗೆಯೇ ದೇವಸ್ಥಾನಕ್ಕೆ (Hassan Temple) ಭೇಟಿ ನೀಡಿದ್ದ ಮಾಜಿ ಸಚಿವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಎಲ್ಲ ಸಂಕಷ್ಟಗಳು ದೂರವಾಗಲೆಂದು ಮೆನಯಲ್ಲೇ ಅಗ್ನಿಕುಂಡ ನಿರ್ಮಿಸಿ ಹೋಮ ನೆರವೇರಿಸಿದ್ದಾರೆ. ನಂತರ ಬೆಂಗಳೂರಿಗೆ ತೆರಳಿದ್ದಾರೆ. ಇದನ್ನೂ ಓದಿ: ತಕ್ಷಣವೇ ವಿಚಾರಣೆಗೆ ಹಾಜರಾಗಿ- ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್‍ಐಟಿ ನೋಟಿಸ್
Advertisement
Advertisement
ಪ್ರಕರಣದ ಎ1 ಆರೋಪಿ:
ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದೆ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆಯೇ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್; ಸಂತ್ರಸ್ತರಿಗೆ ನೆರವಾಗದ ಪೊಲೀಸರು!
Advertisement
ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ಮತ್ತು ಹೆಚ್‌ಡಿ ರೇವಣ್ಣ ಇಬ್ಬರ ವಿರುದ್ಧವೂ ದೂರು ದಾಖಲಾಗಿದೆ. ದೂರಿನ ಆಧಾರದಲ್ಲಿ ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿದೆ. 2015 ರಲ್ಲಿ ಹೆಚ್.ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದಾರೆ. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
Advertisement
ಈ ಹಿನ್ನೆಲ್ಲಿ ಪ್ರಕರಣದ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡ ಇಬ್ಬರಿಗೂ ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ ಈಗಾಗಲೇ 32 ಮತ್ತು 8 ಜಿಬಿಯ ಎರಡು ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಂಡಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.