– ತಾತ ಹೆಚ್‌ಡಿಡಿ ಹಾಗೂ ಶಾಸಕರ ಆಶೀರ್ವಾದ ಪಡೆದ ಪ್ರಜ್ವಲ್
ಹಾಸನ: ಲೋಕಸಭಾ ಚುನಾವಣೆಗೆ (Lok Sabha Election) ನಾಮಪತ್ರ (Nomination) ಸಲ್ಲಿಕೆ ಕಾರ್ಯ ಆರಂಭಗೊಂಡಿದ್ದು, ಹಾಸನ (Hassan) ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.
Advertisement
ಜಿಲ್ಲಾ ಚುನಾವಣಾಧಿಕಾರಿ ಸಿ.ಸತ್ಯಭಾಮಗೆ ಪ್ರಜ್ವಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಶಾಸಕರಾದ ಹೆಚ್‌ಡಿ ರೇವಣ್ಣ, ಎ.ಮಂಜು, ಹೆಚ್‌ಪಿ ಸ್ವರೂಪ್ ಪ್ರಕಾಶ್, ಸಿಎನ್ ಬಾಲಕೃಷ್ಣ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಪ್ರಜ್ವಲ್ ರೇವಣ್ಣ ದೇವರ ಮೊರೆ ಹೋಗಿದ್ದು, ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ನಾಮಪತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣಗೆ ಶಾಸಕ ಹೆಚ್‌ಪಿ ಸ್ವರೂಪ್ ಪ್ರಕಾಶ್ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಭಾರತ ಸಮನ್ಸ್ ನೀಡಿದರೂ ಕೇಜ್ರಿವಾಲ್ ಬಂಧನ ಬಗ್ಗೆ ಅಮೆರಿಕ ಮತ್ತೆ ಪ್ರತಿಕ್ರಿಯೆ
Advertisement
Advertisement
ನಾಮಪತ್ರ ಸಲ್ಲಿಕೆಗೂ ಮುನ್ನ ಹುಟ್ಟೂರು ಹರದನಹಳ್ಳಿಯಲ್ಲಿರುವ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆಶೀರ್ವಾದ ಪಡೆದಿದ್ದು, ಸೂಚಕರಾಗಿ ನಾಮಪತ್ರಕ್ಕೆ ಸಹಿ ಮಾಡಿ ಹೆಚ್‌ಡಿಡಿ ಮೊಮ್ಮಗನಿಗೆ ಹಾರೈಸಿದ್ದಾರೆ. ಬಳಿಕ ಶಾಸಕರಾದ ಎ.ಮಂಜು, ಸಿಎನ್ ಬಾಲಕೃಷ್ಣ ಅವರ ಕಾಲಿಗೆ ಬಿದ್ದು ಪ್ರಜ್ವಲ್ ಆಶೀರ್ವಾದ ಪಡೆದುಕೊಂಡಿದ್ದಾರೆ. ಮಗನ ನಾಮಪತ್ರ ಸಲ್ಲಿಕೆ ಹಿನ್ನೆಲೆ ಮಾಜಿ ಸಚಿವ ಹೆಚ್‌ಡಿ ರೇವಣ್ಣ ದೇವರಿಗೆ ಪೂಜೆ ಸಲ್ಲಿಸಿ ಬರಿಗಾಲಿನಲ್ಲೇ ಚುನಾವಣಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿ ಮಗನ ನಾಮಪತ್ರ ಸಲ್ಲಿಕೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ
Advertisement