ಬೆಂಗಳೂರು: ಪೆನ್‌ಡ್ರೈವ್ ಪ್ರಕರಣದ (Pendrive Case) ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಜರ್ಮನಿಯ (Germany) ಮ್ಯೂನಿಕ್‌ನಿಂದ (Munich) ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಏರ್‌ಪೋರ್ಟ್‌ನಲ್ಲಿ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.
ಅಶ್ಲೀಲ ವೀಡಿಯೋ ಹಾಗೂ ಪೆನ್‌ಡ್ರೈವ್ ಪ್ರಕರಣ ಹೊರಬರುತ್ತಿದ್ದಂತೆಯೇ ಜರ್ಮನಿಯಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ಮರಳಲಿದ್ದಾರೆ. ಈಗಾಗಲೇ ಜರ್ಮನಿಯ ಮ್ಯೂನಿಕ್‌ನಿಂದ ಹೊರಟಿರುವ ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದು, ಇಂದು ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಬೆಂಗಳೂರಿಗೆ (Bengaluru) ತಲುಪಲಿದ್ದಾರೆ. ಈ ಹಿನ್ನೆಲೆ ಪೊಲೀಸರು ಅಲರ್ಟ್ ಆಗಿದ್ದಾರೆ. ಇದನ್ನೂ ಓದಿ: ಮುಸ್ಲಿಂ-ಹಿಂದೂ ವಿವಾಹ ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಮಾನ್ಯವಲ್ಲ: ಮಧ್ಯಪ್ರದೇಶ ಹೈಕೋರ್ಟ್
Advertisement
Advertisement
Advertisement
ಪ್ರಜ್ವಲ್ ಆಗಮನದ ವೇಳೆ ಜನ ಸೇರುವ ಸಾಧ್ಯತೆ ಹೆಚ್ಚಾಗಿದ್ದು, ಜನ ಸೇರಿದರೆ ಸಂಚಾರಕ್ಕೆ ತೊಂದರೆ ಆಗಬಹುದು. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಂಚಾರಿ ಪೊಲೀಸರು ಅಲರ್ಟ್ ಆಗಿದ್ದಾರೆ. ಪ್ರಜ್ವಲ್ ಬಂಧನ ಮಾಡಿ ಕರೆದುಕೊಂಡು ಹೋಗುವ ವೇಳೆಗೆ ಯಾವುದೇ ತೊಂದರೆ ಆಗಬಾರದು ಎಂದು ಮುನ್ನೆಚ್ಚರಿಕೆ ವಹಿಸಲಾಗಿದೆ. ಅಲ್ಲದೇ ಏರ್‌ಪೋರ್ಟ್ ರಸ್ತೆಯಲ್ಲಿ ವಾಹನಗಳನ್ನು ನಿಲುಗಡೆ ಮಾಡದಂತೆ ಸೂಚಿಸಿದ್ದು, ಜನಸಂದಣಿ ಸೇರದಂತೆ ಟ್ರಾಫಿಕ್ ಕ್ಲಿಯರ್ ಮಾಡಲಾಗುತ್ತಿದೆ. ಇದನ್ನೂ ಓದಿ: ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ನೀಡುವ ಯೋಜನೆ – ಏನು ಷರತ್ತುಗಳು ಹಾಕ್ತಾರೋ ಗೊತ್ತಿಲ್ಲ ಎಂದ ಡಿಕೆಶಿ
Advertisement
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ (Kempegowda Airport) ಟ್ರಾಫಿಕ್ ಪೊಲೀಸರು ಮತ್ತು ಲಾ ಆ್ಯಂಡ್ ಆರ್ಡರ್ ಪೊಲೀಸರು ಭೇಟಿ ನೀಡಿದ್ದು, ಪ್ರಜ್ವಲ್ ಕರೆದೊಯ್ಯುವ ಮಾರ್ಗವನ್ನು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಟ್ರಾಫಿಕ್ ಆಗದಂತೆ ಜೊತೆಗೆ ಯಾರಾದರೂ ಪ್ರತಿಭಟನೆ ಮಾಡಲು ಮುಂದಾದರೆ ಮುಂಜಾಗ್ರತಾ ಕ್ರಮವಹಿಸಲು ಪರಿಶೀಲನೆ ನಡೆಸಲಾಗಿದೆ. ಟರ್ಮಿನಲ್ 2ರ ಬಳಿ ಮಾರ್ಗ ಪರಿಶೀಲನೆ ಮಾಡಿ ಪೊಲೀಸರು ತೆರಳಿದ್ದಾರೆ. ಇದನ್ನೂ ಓದಿ: ಜೂನ್ 6ರ ಒಳಗಡೆ ನಾಗೇಂದ್ರ ರಾಜೀನಾಮೆ ನೀಡದೇ ಇದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ: ರವಿಕುಮಾರ್ ಎಚ್ಚರಿಕೆ